ಸೋಮವಾರ, ಫೆಬ್ರವರಿ 5, 2024

ಫೆ.13 ರಿಂದ ಲೋಕಾಯುಕ್ತರಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ

ಬಳ್ಳಾರಿ,ಫೆ.05(ಕರ್ನಾಟಕ ವಾರ್ತೆ): ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದಿಂದ ಜಿಲ್ಲೆಯ ಸಿರುಗುಪ್ಪ, ಬಳ್ಳಾರಿ ಮತ್ತು ಕಂಪ್ಲಿ ತಾಲ್ಲೂಕು ಕೇಂದ್ರಗಳಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆಯನ್ನು ಫೆ.13 ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಬಳ್ಳಾರಿ ವಿಭಾಗ ಲೋಕಾಯುಕ್ತ ಪೆÇಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಅವರು ತಿಳಿಸಿದ್ದಾರೆ. ಫೆ.13 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಸಿರುಗುಪ್ಪದ ಸಿಡಿಪಿಒ ಕಚೇರಿ ಸಭಾಂಗಣ, ಫೆ.14 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಬಳ್ಳಾರಿ ತಾಲ್ಲೂಕು ಕಚೇರಿ ಸಭಾಂಗಣ ಮತ್ತು ಫೆ.15 ರಂದು ಕಂಪ್ಲಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ನಡೆಯಲಿದೆ. ಕುಂದು ಕೊರತೆಗಳಿರುವ ಸಾರ್ವಜನಿಕರು ನಿಗದಿತ ದಿನ ಮತ್ತು ಸ್ಥಳದಲ್ಲಿ ತಮ್ಮ ದೂರು ಅರ್ಜಿಗಳನ್ನು ನೀಡಬಹುದು. ಕುಂದುಕೊರತೆಗಳ ಅಹವಾಲುಗಳ ಅರ್ಜಿಗಳನ್ನು ಸ್ವೀಕರಿಸಿ, ವಿಚಾರಿಸಲಾಗುತ್ತದೆ. ಕರ್ನಾಟಕ ಲೋಕಾಯುಕ್ತ ಬೆಂಗಳೂರು ವಿಭಾಗ ಲೋಕಾಯುಕ್ತರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ:01 ಮತ್ತು 02 ಗಳನ್ನು ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ