ಸೋಮವಾರ, ಫೆಬ್ರವರಿ 12, 2024

ಫೆ.15 ರಂದು ಸಂತ ಸೇವಾಲಾಲ್ ಜಯಂತಿ

ಬಳ್ಳಾರಿ,ಫೆ.12(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಫೆ.15 ರಂದು ಮಧ್ಯಾಹ್ನ 12.30 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣ ರಸ್ತೆಯ ವಾಲ್ಮೀಕಿ ಭವನದಲ್ಲಿ ಏರ್ಪಡಿಸಲಾಗಿದೆ. ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಉದ್ಘಾಟನೆ ಮಾಡುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗು ಶಾಸಕ ಜೆ.ಎನ್ ಗಣೇಶ್, ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಬಿ.ಎಂ ನಾಗರಾಜ್, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾ ಪೌರರಾದ ಬಿ.ಶ್ವೇತ ಅವರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲಾ ಆಸ್ಪತ್ರೆಯ ಉಪಮುಖ್ಯ ವೈದ್ಯಾಧಿಕಾರಿಗಳು ಹಾಗೂ ವೈದ್ಯಕೀಯ ದಾಖಲಾತಿ ವಿಭಾಗದ ಅಧಿಕಾರಿಗಳಾದ ಡಾ.ಗುರುನಾಥ ಬಿ.ಚವ್ಹಾಣ ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡುವರು. ಕೆ.ವಸಂತ್ ಕುಮಾರ್ ಅವರಿಂದ ಸುಗಮ ಸಂಗೀತ ಇರಲಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್, ಮಹಾನಗರ ಪಾಲಿಕೆ ಆಯುಕ್ತರಾದ ಜಿ.ಖಲೀಲ್ ಸಾಬ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿರುವರು. *ಮೆರವಣಿಗೆ:* ಜಯಂತಿಯ ಅಂಗವಾಗಿ ಮೆರವಣಿಗೆಯು ಮುನಿಸಿಪಲ್ ಮೈದಾನದಿಂದ ಆರಂಭವಾಗಿ ಇಂದಿರಾ ವೃತ್ತ, ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್‍ಪೇಟೆ ಪೊಲೀಸ್ ಠಾಣೆ, ತೇರು ಬೀದಿ, ಹೆಚ್.ಆರ್.ಗವಿಯಪ್ಪ ವೃತ್ತದ ಮಾರ್ಗವಾಗಿ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವಾಲ್ಮೀಕಿ ಭವನದವರೆಗೆ ಸಾಗಿ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ