ಮಂಗಳವಾರ, ಫೆಬ್ರವರಿ 13, 2024
ಫೆ.15 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಫೆ.13(ಕರ್ನಾಟಕ ವಾರ್ತೆ):
ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದ ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುರಿಂದ ಫೆ.15 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-6 ಫೀಡರ್‍ನ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‍ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಹವಂಭಾವಿ.
ಎಫ್-10 ಫೀಡರ್‍ನ ಅಶೋಕ ನಗರ, ಹಾವಂಭಾವಿ, ಟಿ.ಎಂ.ಜಿ ಲೇಔಟ್, ರಾಮನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರ ಹಾಗೂ ಎಫ್-14 ಫೀಡರ್ ವ್ಯಾಪ್ತಿಯ ಹೊಸ ನ್ಯಾಯಾಲಯ ಸಂಕೀರ್ಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ