ಬುಧವಾರ, ಫೆಬ್ರವರಿ 14, 2024

ಫೆ.16, 17 ರಂದು ಎರಡು ದಿನಗಳ ಕಾರ್ಯಾಗಾರ

ಬಳ್ಳಾರಿ,ಫೆ,14(ಕರ್ನಾಟಕ ವಾರ್ತೆ): ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೆÇಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ ಕಾಯ್ದೆ-2015, ಪೆÇೀಕ್ಸೊ ಕಾಯ್ದೆ-2012, ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಆರ್.ಟಿ.ಐ ಕಾಯ್ದೆ-2009ರ ಕುರಿತು ಭಾಗೀದಾರ ಇಲಾಖೆಗಳ ಜಿಲ್ಲಾ, ತಾಲ್ಲೂಕು, ಗ್ರಾಮ ಮಟ್ಟದ ಅಧಿಕಾರಿಗಳಿಗೆ ಎರಡು ದಿನದ ಕಾರ್ಯಾಗಾರವನ್ನು ಫೆ.16 ಮತ್ತು 17ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್‍ನ ನಜೀರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಫೆ.16 ರಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಕಾರ್ಯಾಗಾರ ಉದ್ಘಾಟಿಸುವರು. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ ಮಿಶ್ರಾ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ರಾಜೇಶ್ ಎನ್.ಹೊಸಮನೆ, ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್.ಕೆ.ಹೆಚ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷ್ಮೀ ಮೈದೂರು, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಾಣಾಧಿಕಾರಿ ಹಾಗೂ ಪ್ರಭಾರಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ನಾಯಕ.ಎಂ ಇವರು ಉಪಸ್ಥಿತರಿರುವರು. ಕೊಪ್ಪಳ ಯೂನಿಸೇಫ್ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕರಾದ ಡಾ.ಕೆ.ರಾಘವೇಂದ್ರ ಭಟ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಸದಸ್ಯರಾದ ರಾಘವೇಂದ್ರ.ಹೆಚ್.ಸಿ ಅವರು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ