ಸೋಮವಾರ, ಫೆಬ್ರವರಿ 12, 2024

ಫೆ.16 ರಂದು ಸವಿತಾ ಮಹರ್ಷಿ ಜಯಂತಿ

ಬಳ್ಳಾರಿ,ಫೆ.12(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಫೆ.16 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಉದ್ಘಾಟನೆ ಮಾಡುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗು ಶಾಸಕ ಜೆ.ಎನ್ ಗಣೇಶ್, ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಬಿ.ಎಂ ನಾಗರಾಜ್, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾ ಪೌರರಾದ ಬಿ.ಶ್ವೇತ, ಜಿಲ್ಲಾ ಸವಿತಾ ಸಮಾಜ ಸಂಘದ ಅಧ್ಯಕ್ಷ ಸಣ್ಣಗೊಂಡ್ಲ ರಾಕೇಶ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಕೆ.ಬಿ.ಸಿದ್ದಲಿಂಗಪ್ಪ ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡುವರು. ಕೆ.ಕಲ್ಯಾಣಿ ಅವರಿಂದ ವಚನ ಗಾಯನ ಇರಲಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್, ಮಹಾನಗರ ಪಾಲಿಕೆ ಆಯುಕ್ತರಾದ ಜಿ.ಖಲೀಲ್ ಸಾಬ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿರುವರು. *ಮೆರವಣಿಗೆ:* ಜಯಂತಿಯ ಅಂಗವಾಗಿ ಮೆರವಣಿಗೆಯು ಹೊಸ ಜಿಲ್ಲಾಡಳಿತ ಭವನದಿಂದ ಆರಂಭವಾಗಿ ಇಂದಿರಾ ವೃತ್ತ, ಕೆ.ಸಿ.ರಸ್ತೆ, ಮೀನಾಕ್ಷಿ ವೃತ್ತ, ಹಳೇ ತಾಲ್ಲೂಕು ಕಚೇರಿ, ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಬಿಡಿಎಎ ಫುಟ್‍ಬಾಲ್ ಮೈದಾನದ ವೇದಿಕೆ ಕಾರ್ಯಕ್ರಮಕ್ಕೆ ಸಾಗಿ ಬರಲಿದೆ ಎಂದು ಪ್ರಕಟಣೆ ತಿಳಿಸಿದೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ