ಗುರುವಾರ, ಫೆಬ್ರವರಿ 15, 2024

ಫೆ.17 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ

ಬಳ್ಳಾರಿ,ಫೆ.15(ಕರ್ನಾಟಕ ವಾರ್ತೆ): ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಮೋಕಾ ಶಾಖೆ ವ್ಯಾಪ್ತಿಯ ಬರುವ ಎಲ್ಲಾ ಗ್ರಾಹಕರಿಗೆ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಫೆ.17 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ವರೆಗೆ ಚಾನಾಳ್ ಗ್ರಾಮದ ಬಸವನಗುಡಿ ಅವರಣದಲ್ಲಿ ಆಯೋಜಿಸಲಾಗಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ