ಶನಿವಾರ, ಫೆಬ್ರವರಿ 17, 2024
ಫೆ.17 ರಂದು ‘ಜಾಗ್ರತೆ’ ಕಾರ್ಯಕ್ರಮ
ಬಳ್ಳಾರಿ,ಫೆ.16(ಕರ್ನಾಟಕ ವಾರ್ತೆ):
ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ವಂಚನೆ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ‘ಜಾಗ್ರತೆ’ ಕಾರ್ಯಕ್ರಮವನ್ನು ಫೆ.17 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಉದ್ಘಾಟನೆ ಮಾಡುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗು ಶಾಸಕ ಜೆ.ಎನ್ ಗಣೇಶ್, ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಬಿ.ಎಂ ನಾಗರಾಜ್, ನಾರಾ ಭರತ್ ರೆಡ್ಡಿ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾ ಪೌರರಾದ ಬಿ.ಶ್ವೇತ ಅವರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್, ಸಹಾಯಕ ಆಯುಕ್ತ ಹೇಮಂತ್.ಎನ್., ಅರಣ್ಯ ಉಪಸಂರಕ್ಷಣಾಧಿಕಾರಿ ಸಂದೀಪ್ ಹಿಂದುರಾವ್ ಸೂರ್ಯವಂಶಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕೆ.ಪಿ.ರವಿಕುಮಾರ್, ನವೀನ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತರಾದ ಜಿ.ಖಲೀಲ್ ಸಾಬ್, ಮಿನೆರ ಸ್ಟೀಲ್ಸ್ ಮತ್ತು ಪವರ್ ಪ್ರೈ.ಲಿಮಿಟೆಡ್‍ನ ನಿರ್ದೇಶಕ ಹನ್ಮಂತ್ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ