ಮಂಗಳವಾರ, ಫೆಬ್ರವರಿ 13, 2024

ಫೆ.19 ರಂದು ಛತ್ರಪತಿ ಶಿವಾಜಿ ಜಯಂತಿ

ಬಳ್ಳಾರಿ,ಫೆ.13(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವನ್ನು ಫೆ.19 ರಂದು ಸಂಜೆ 6 ಗಂಟೆಗೆ ನಗರದ ಡಾ.ರಾಜಕುಮಾರ್ ರಸ್ತೆಯ ಬಿ.ಡಿ.ಎ.ಎ ಫುಟ್‍ಬಾಲ್ ಮೈದಾನದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಉದ್ಘಾಟನೆ ಮಾಡುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗು ಶಾಸಕ ಜೆ.ಎನ್ ಗಣೇಶ್, ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಬಿ.ಎಂ ನಾಗರಾಜ್, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾ ಪೌರರಾದ ಬಿ.ಶ್ವೇತ ಅವರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕರ್ನಾಟಕ ಮರಾಠ ಶ್ರೀ ಛತ್ರಪತಿ ಶಿವಾಜಿ ಮಹಾರಾಜ್ ಸೇನೆಯ ಯುವಘಟಕದ ರಾಜ್ಯಾಧ್ಯಕ್ಷ ವಿನೋದ್ ಎಂ.ಚವ್ಹಾಣ ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡುವರು. ಜಯತೀರ್ಥ ಜಾಗೀರದಾರ್ ಅವರಿಂದ ವಚನ ಗಾಯನ ಇರಲಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್, ಮಹಾನಗರ ಪಾಲಿಕೆ ಆಯುಕ್ತರಾದ ಜಿ.ಖಲೀಲ್ ಸಾಬ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿರುವರು. *ಮೆರವಣಿಗೆ:* ಜಯಂತಿಯ ಅಂಗವಾಗಿ ಹಮ್ಮಿಕೊಳ್ಳುವ ಮೆರವಣಿಗೆಯು ಶ್ರೀ ಪಾಂಡುರಂಗ ದೇವಸ್ಥಾನದಿಂದ ಆರಂಭವಾಗಿ ಕಾಳಮ್ಮ ಬೀದಿ, ಹಳೆ ಬ್ರೂಸ್‍ಪೇಟೆ ಪೊಲೀಸ್ ಠಾಣೆ, ತೇರು ಬೀದಿ, ಹೆಚ್.ಆರ್ ಗವಿಯಪ್ಪ ವೃತ್ತದಿಂದ ಹಲೇ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಿಂದ ಬಿಡಿಎಎ ಫುಟ್‍ಬಾಲ್ ಮೈದಾನದವರೆಗೆ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ