ಶನಿವಾರ, ಫೆಬ್ರವರಿ 17, 2024

ಫೆ.19 ರಂದು ಶ್ರೀ ಕನಕದುರ್ಗಮ್ಮ ದೇವಸ್ಥಾನ ಸಿಡಿಬಂಡಿ ರಥೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ

ಬಳ್ಳಾರಿ,ಫೆ.17(ಕರ್ನಾಟಕ ವಾರ್ತೆ): ನಗರದ ಶ್ರೀ ಕನಕದುರ್ಗಮ್ಮ ದೇವಸ್ಥಾನದ ವಾರ್ಷಿಕ ಸಿಡಿ ಬಂಡಿ ರಥೋತ್ಸವವು ಮಾ.19 ರಂದು ಜರುಗಲಿರುವ ಪ್ರಯುಕ್ತ ಪೂರ್ವಭಾವಿ ಸಿದ್ಧತಾ ಸಭೆಯು ಫೆ.19 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರು ಮತ್ತು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರಿಂದ ನೈರ್ಮಲಿಕರಣ, ಸ್ವಚ್ಛತೆ, ಬಂದೋಬಸ್ತ್, ಕುಡಿಯುವ ನೀರು, ಸಾರಿಗೆ ವ್ಯವಸ್ಥೆ, ದೇವರ ದರ್ಶನ, ಧಾರ್ಮಿಕ ಕಾರ್ಯಗಳು ಇತ್ಯಾದಿ ಕೆಲಸ ಕಾರ್ಯಗಳನ್ನು ವಿವಿಧ ಇಲಾಖೆಗಳಿಂದ ಕ್ರಮ ಅನುಸರಿಸಬೇಕಾಗುತ್ತದೆ. ಸದರಿ ಸಭೆಗೆ ಕಳೆದ ಸಾಲಿನಲ್ಲಿ ಕೈಗೊಂಡ ಕ್ರಮದ ಬಗ್ಗೆ ಹಾಗೂ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಅಗತ್ಯ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ