ಸೋಮವಾರ, ಫೆಬ್ರವರಿ 26, 2024

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿ ನಿಬರ್ಂಧ ವಿಧಿಸಿ ಡಿಸಿ ಮಿಶ್ರಾ ಆದೇಶ

ಬಳ್ಳಾರಿ,ಫೆ.26(ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ ಮಾರ್ಚ್ 01 ರಿಂದ 22 ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಒಳಗಿನ ಆವರಣವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144ರ ಮೇರೆಗೆ ನಿರ್ಭಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ಬಳ್ಳಾರಿ ಜಿಲ್ಲೆಯಾದ್ಯಂತ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ. ಆಯಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನಲ್ಲಿರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳನ್ನು ಮುಚ್ಚುವಂತೆಯೂ ಮತ್ತು ಈ ಆದೇಶವು ಪರೀಕ್ಷಾ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ