ಬುಧವಾರ, ಫೆಬ್ರವರಿ 21, 2024

ಫೆ.23 ರಂದು ತುರ್ತು ನೀರಾವರಿ ಸಲಹಾ ಸಮಿತಿ ಸಭೆ

ಬಳ್ಳಾರಿ,ಫೆ.21(ಕರ್ನಾಟಕ ವಾರ್ತೆ): ಬೇಸಿಗೆಯಲ್ಲಿ ಕುಡಿಯುವ ನೀರನ್ನು ಸಮರ್ಪಕವಾಗಿ ಒದಗಿಸುವ ನಿಟ್ಟಿನಲ್ಲಿ ತುಂಗಾಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ 121 ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯನ್ನು ಫೆ.23 ರಂದು ಸಂಜೆ 04 ಗಂಟೆಗೆ ಬೆಂಗಳೂರಿನ ವಿಧಾನಸೌಧದ 3 ನೇ ಮಹಡಿಯ ಕೊಠಡಿ ಸಂಖ್ಯೆ.334 ರ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರೂ ಆದ ಶಿವರಾಜ ಎಸ್.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ತುಂಗಾಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ