ಬುಧವಾರ, ಫೆಬ್ರವರಿ 28, 2024
ಫೆ.29 ರಂದು ಮಕ್ಕಳ ಹಬ್ಬ ಕಾರ್ಯಕ್ರಮ
ಬಳ್ಳಾರಿ,ಫೆ.28(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಫೆ.29 ರಂದು ಬೆಳಿಗ್ಗೆ 10.30 ಕ್ಕೆ ನಗರದ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯ ಭವನದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶರಾದ ರಾಜೇಶ್.ಎನ್ ಹೊಸಮನೆ ಅವರು ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ.ರಮೇಶ ಬಾಬು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಉಮಾದೇವಿ.ಬಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್‍ಷಾ ಅಲ್ತಾಪ್ ಅಹಮ್ಮದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್.ಕೆ.ಹೆಚ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ನಾಯಕ.ಎಂ ಸೇರಿದಂತೆ ಇತರರು ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ, ಸಂಗೀತ, ನಾಟಕ ಪ್ರದರ್ಶನ, ಜನಪದ ನೃತ್ಯ, ಕಾವ್ಯ, ಕಥೆ, ಚಿತ್ರಕಲೆ, ಕ್ಲೇ ಮಾಡೆಲಿಂಗ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ