ಗುರುವಾರ, ಫೆಬ್ರವರಿ 1, 2024
ಸಮಾಜ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬಳ್ಳಾರಿ,ಫೆ.01(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ದಾಖಲಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.20 ರ ವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್ ಅವರು ತಿಳಿಸಿದ್ದಾರೆ.
ಇಂಜಿನಿಯರಿಂಗ್, ಮೆಡಿಕಲ್, ಬಿ.ಎಡ್, ಪ್ಯಾರಾ ಮೆಡಿಕಲ್ ಹಾಗೂ ಸ್ನಾತಕೋತ್ತರ ಕೋರ್ಸ್‍ಗಳಲ್ಲಿ ಪ್ರವೇಶ ಪಡೆದ ಅರ್ಹ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಎಸ್‍ಹೆಚ್‍ಪಿ (Sಣಚಿಣe ಊosಣeಟ Poಡಿಣಚಿಟ) ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ ವಿಳಾಸ ತಿತಿತಿ.sತಿ.ಞಚಿಡಿ.ಟಿiಛಿ.iಟಿ ಗೆ ಭೇಟಿ ನೀಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ