ಬುಧವಾರ, ಫೆಬ್ರವರಿ 21, 2024
ಸಂವಿಧಾನ ಜಾಗೃತಿ ಜಾಥಾ: ಸಂಡೂರು ಪಟ್ಟಣದಲ್ಲಿ ಸಂಚಾರ
ಬಳ್ಳಾರಿ,ಫೆ.21(ಕರ್ನಾಟಕ ವಾರ್ತೆ):
ಸಂವಿಧಾನ ಜಾಗೃತಿ ಜಾಥಾವು ಬುಧವಾರದಂದು ಸಂಡೂರು ಪಟ್ಟಣದ ವಿವಿಧ ವಾರ್ಡ್‍ಗಳಲ್ಲಿ ಸಂಚರಿಸಿತು.
ಸಂಡೂರು ಪಟ್ಟಣಕ್ಕೆ ಆಗಮಿಸಿದ ಜಾಥಾವನ್ನು ಕಳಶ ಹಿಡಿದ ಮತ್ತು ಪೂರ್ಣ ಕುಂಭ ಹೊತ್ತ ಮಹಿಳೆಯರು, ಹಲಗೆ ಮತ್ತು ಡೊಳ್ಳು ಕಲಾವಿದರು, ಕಂಸಾಳೆ, ನಂದಿ ಕೋಲು ಕುಣಿತದ ಕಲಾವಿದರು, ವೀರಗಾಸೆ ಕಲಾ ಪ್ರದರ್ಶನ, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಪಟ್ಟಣದ ಮುಖಂಡರು ಹಾಗೂ ಸಾರ್ವಜನಿಕರು ಅದ್ದೂರಿಯಾಗಿ ಬರ ಮಾಡಿಕೊಂಡರು.
ಜಾಥಾದಲ್ಲಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಕುರಿತು ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಲಾಯಿತು. ಸಂವಿಧಾನ ರಚನಾ ಸಭೆ ಹಾಗೂ ಸಂವಿಧಾನದ ಕುರಿತ ವೀಡಿಯೋ ತುಣುಕುಗಳನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಾಯಿತು.
ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ, ಜಾಥಾದ ಉದ್ದಕ್ಕೂ ಸಂವಿಧಾನ ಪ್ರಸ್ತಾವನೆಯ ಪ್ರತಿಗಳನ್ನು ಹಂಚಿಕೆ ಮಾಡಲಾಯಿತು.
ಜಾಥಾವು ತಾಲ್ಲೂಕು ಕಚೇರಿಯಿಂದ ಹೊರಟು, ವಿಜಯಾ ಸರ್ಕಲ್‍ನ ಸ್ತಬ್ಧಚಿತ್ರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಪುತ್ಥಳಿಗೆ ಪೂಜೆ ಸಲ್ಲಿಸಿ, ನಂತರದಲ್ಲಿ ಸಂಡೂರು ಪಟ್ಟಣದ ವಿವಿಧ ವಾರ್ಡ್‍ಗಳಲ್ಲಿ ಉದ್ಘೋಷಗಳೊಂದಿಗೆ ಸಂಚಾರ ನಡೆಸಿತು.
ಈ ವೇಳೆ ತಹಶೀಲ್ದಾರ ಅನೀಲ್, ತಾಲ್ಲೂಕು ಪಂಚಾಯಿತಿ ಇಓ ಷಡಕ್ಷರಯ್ಯ, ಪುರಸಭೆ ಮುಖ್ಯಾಧಿಕಾರಿ ಜಯಣ್ಣ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗದವರು, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ ವರ್ಗದವರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಭಾಗವಹಿಸಿದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ