ಸೋಮವಾರ, ಫೆಬ್ರವರಿ 26, 2024
ಮೃತ ದೇಹ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಫೆ.26(ಕರ್ನಾಟಕ ವಾರ್ತೆ):
ಬ್ರೂಸ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವೈಶಾಲಿ ಲಾಡ್ಜ್ ಮುಂದೆ ಸುಮಾರು 40-45 ವರ್ಷದ ಭಿಕ್ಷೆ ಬೇಡುತ್ತಿದ್ದ ಅನಾಮಧೇಯ ವ್ಯಕ್ತಿಯು ಫೆ.25 ರಂದು ಮೃತ ಪಟ್ಟಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕೆಂದು ಬ್ರೂಸ್‍ಪೇಟೆ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಮನವಿ ಮಾಡಿದ್ದಾರೆ.
ಮೃತನ ಚಹರೆ: ಎತ್ತರ 5.5 ಅಡಿ, ಸಾಧಾರಣ ಕಪ್ಪು ಮೈಬಣ್ಣ, ದೃಢವಾದ ಮೈಕಟ್ಟು ಹೊಂದಿದ್ದು, ದುಂಡು ಮುಖ, ತಲೆಯಲ್ಲಿ ಕಪ್ಪು ಕೂದಲು, ಕಪ್ಪು ಮೀಸೆ, ಕಪ್ಪು ಗಡ್ಡ ಇರುತ್ತದೆ.
ಮೃತನ ದೇಹದ ಮೇಲೆ ಬಿಳಿ ಚೌಕಳಿಯ ತುಂಬು ತೋಳಿನ ಅಂಗಿ, ಬೂದು ಬಣ್ಣದ ಪ್ಯಾಂಟ್ ಮತ್ತು ಉಡುದಾರ ಧರಿಸಿರುತ್ತಾನೆ.
ಮೇಲ್ಕಂಡ ಚಹರೆಯುಳ್ಳ ಮೃತ ವ್ಯಕ್ತಿಯ ಸಂಬಂಧಿಕರ ಬಗ್ಗೆ ಮಾಹಿತಿ ಇದ್ದಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ:08392258100, ಬಳ್ಳಾರಿ ಬ್ರೂಸ್‍ಪೇಟೆ ಪೊಲೀಸ್ ಠಾಣೆ ದೂ:08392272022, ಬ್ರೂಸ್‍ಪೇಟೆ ಪೊಲೀಸ್ ಠಾಣೆಯ ಪಿ.ಎಸ್.ಐ ಮೊ:9480803081, ಬ್ರೂಸ್‍ಪೇಟೆ ಪೊಲೀಸ್ ಠಾಣೆಯ ಪಿ.ಐ ಮೊ:9480803045 ಇವರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ