ಬುಧವಾರ, ಫೆಬ್ರವರಿ 21, 2024

ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಬಳ್ಳಾರಿ,ಫೆ.21(ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.29 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ವೃತ್ತಿಪರ, ಸ್ನಾತಕೋತ್ತರ ಪದವಿ ಕೋರ್ಸ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ. ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ಪೆÇೀಷಕರ ಆದಾಯ 2.50 ಲಕ್ಷ ಇರಬೇಕು. ಪ್ರವರ್ಗ-2 2ಎ, 2ಬಿ, 3ಎ, 3ಬಿ ವರ್ಗದ ಪೆÇೀಷಕರ ಆದಾಯ 1 ಲಕ್ಷವಿರಬೇಕು. ವಿದ್ಯಾರ್ಥಿಗಳು ಇಲಾಖೆಯ ಆನ್‍ಲೈನ್ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಸಂಧರ್ಭದಲ್ಲಿ ತಾಂತ್ರಿಕದೋಷ ಕಂಡುಬಂದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಥವಾ ತಾಲ್ಲೂಕು ಅಧಿಕಾರಿಗಳ ಕಚೇರಿ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770005 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ