ಸೋಮವಾರ, ಫೆಬ್ರವರಿ 5, 2024

ಕೆಪಿಟಿಸಿಎಲ್ ಮಾರ್ಗದಲ್ಲಿ ವಿದ್ಯುತ್ ಪೂರೈಕೆ: ಸಾರ್ವಜನಿಕರು ಎಚ್ಚರದಿಂದಿರಲು ಸೂಚನೆ

ಬಳ್ಳಾರಿ,ಫೆ.05(ಕರ್ನಾಟಕ ವಾರ್ತೆ): ಕುರುಗೊಡು ತಾಲ್ಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಹೊಸ 2*10 ಎಂ.ವಿ.ಎ 110/11 ಕೆ.ವಿ ವಿದ್ಯುತ್ ಉಪ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ 12.179 ಕಿಲೋಮೀಟರ್ ಉದ್ದದ 110 ಕೆ.ವಿ ಪ್ರಸರಣ ಮಾರ್ಗದ ನಿರ್ಮಾಣ ಕಾರ್ಯವು ಪೂರ್ಣಗೊಂಡಿದ್ದು, ವಿದ್ಯುತ್ ಪ್ರಸರಣ ಮಾರ್ಗವು ಮೆಟ್ರಿ, ಜವುಕು, ಹಿರೇಜಾಯಿಗನೂರು, ಚಿಕ್ಕಜಾಯಿಗನೂರು, ಎಮ್ಮಿಗನೂರು ಗ್ರಾಮಗಳ ವ್ಯಾಪ್ತಿಯಲ್ಲಿ ಹಾದುಹೋಗಿರುತ್ತದೆ. ಈ ಪ್ರಸರಣ ಮಾರ್ಗವನ್ನು ಫೆ.07 ರಂದು ಅಥವಾ ನಂತರದ ದಿನಗಳಲ್ಲಿ ಚಾಲನೆಗೊಳಿಸಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಮಾರ್ಗದ ವಿದ್ಯುತ್ ಗೋಪುರಗಳನ್ನು ಹತ್ತುವುದಾಗಲೀ, ಅವುಗಳಿಗೆ ದನಕರುಗಳನ್ನು ಕಟ್ಟುವುದಾಗಲಿ, ಹಸಿರು ಬಳ್ಳಿ, ಗಿಡದ ಟೊಂಗೆಗಳನ್ನು ಅಥವಾ ಲೋಹದ ತಂತಿಗಳನ್ನು ಎಸೆಯುವುದಾಗಲಿ ಮಾಡಬಾರದು. ಇದರಿಂದ ಸಾರ್ವಜನಿಕರ ಆಸ್ತಿ-ಪಾಸ್ತಿ ಹಾಗೂ ಪ್ರಾಣಕ್ಕೆ ಹಾನಿಯಾಗುವ ಸಂಭವವಿರುತ್ತದೆ. ಅಪಘಾತ ಅಥವಾ ಹಾನಿ ಉಂಟಾದಲ್ಲಿ ಅಂತಹ ಕೃತ್ಯಗಳನ್ನು ಎಸಗಿದವರೇ ಜವಾಬ್ದಾರರಾಗಿರುತ್ತಾರೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಬೃಹತ್ ಕಾಮಗಾರಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ