ಶನಿವಾರ, ಫೆಬ್ರವರಿ 17, 2024

ಬೈಕ್ ಸವಾರರು ತಪ್ಪದೇ ಹೆಲ್ಮೆಟ್ ಬಳಸಿ: ಎಸ್ಪಿ ರಂಜಿತ್ ಕುಮಾರ್ ಬಂಡಾರು

ಬಳ್ಳಾರಿ,ಫೆ.17(ಕರ್ನಾಟಕ ವಾರ್ತೆ): ಜಿಲ್ಲಾ ಪೆÇಲೀಸ್ ಇಲಾಖೆ ವತಿಯಿಂದ ‘ಹೆಲ್ಮೆಟ್ ಧರಿಸಿ ಜೀವ ಉಳಿಸಿ’ ಮತ್ತು ರಸ್ತೆ ಸಂಚಾರ ಕಾನೂನುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಾಗೃತಿ ಮೂಡಿಸುವ ಅಭಿಯಾನ ಶನಿವಾರ ಬಳ್ಳಾರಿ ನಗರದಲ್ಲಿ ನಡೆಯಿತು. ನಗರದ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಿಂದ ಹಮ್ಮಿಕೊಂಡಿದ್ದ ‘ಹೆಲ್ಮೆಟ್ ಧರಿಸಿ ಜೀವ ಉಳಿಸಿ’ ಅಭಿಯಾನಕ್ಕೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಚಾಲನೆ ನೀಡಿದರು. ಬಳ್ಳಾರಿ ವಲಯ ಪೆÇಲೀಸ್ ಮಹಾನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ್ ಅವರ ನೇತೃತ್ವದಲ್ಲಿ ಅಭಿಯಾನ ನಡೆದಿದ್ದು, ಹೆಲ್ಮೆಟ್ ಧರಿಸದೇ ಸಂಚರಿಸುವುದರಿಂದ ಸಂಭವಿಸುವ ಜೀವ ಹಾನಿ ಮತ್ತು ಹೆಲ್ಮೆಟ್ ಧರಿಸುವುದರಿಂದ ಆಗುವ ಲಾಭ ಕುರಿತು ತಿಳಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಮಾತನಾಡಿ, ಬೈಕ್ ಸವಾರರು ಸ್ವಯಂ ಪ್ರೇರಣೆಯಿಂದ ಹೆಲ್ಮೆಟ್ ಧರಿಸಬೇಕು. ಜಿಲ್ಲೆಯಲ್ಲಿ ಹೆಲ್ಮೆಟ್ ಧರಿಸದೇ ಬೈಕ್ ಸವಾರರ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ಇದನ್ನು ತಡೆಯಲು ಎಲ್ಲರೂ ಸಂಚಾರ ನಿಯಮ ಪಾಲಿಸಬೇಕು ಎಂದು ಸಲಹೆ ನೀಡಿದರು. ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದು ಅನಿವಾರ್ಯ, ಇಲ್ಲವಾದರೆ ದಂಡ ಪಾವತಿಸುವುದು ಕೂಡ ಅನಿವಾರ್ಯ ಎಂಬುದು ತಿಳಿದುಕೊಳ್ಳಬೇಕು. ಬಿಸಿಲು ಇದೆ ಎಂದು ಯಾವುದೇ ಕುಂಟು ನೆಪಗಳು ಹೇಳುವ ಅವಶ್ಯಕತೆ ಇಲ್ಲ ಎಂಬುದನ್ನು ಮನವರಿಕೆ ಮಾಡಿಸಲಾಯಿತು. ಹೆಲ್ಮೆಟ್ ಧರಿಸದ ಕಾರಣ ಅನೇಕರ ಜೀವಕ್ಕೆ ಹಾನಿಯಾಗುತ್ತಿದೆ. ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಇಂತಹ ಅಭಿಯಾನ ಮಾಡಲಾಗುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ಪೆÇಲೀಸ್ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಹೆಲ್ಮೆಟ್ ವಿತರಿಸಲಾಯಿತು. ಈ ವೇಳೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ನವೀನ್ ಕುಮಾರ್, ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಅಯ್ಯನಗೌಡ ಪಾಟೀಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ