ಸೋಮವಾರ, ಫೆಬ್ರವರಿ 12, 2024
ಯುವಕ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ಫೆ.12(ಕರ್ನಾಟಕ ವಾರ್ತೆ):
ಸಂಡೂರು ತಾಲ್ಲೂಕಿನ ಚೋರನೂರು ಪೊಲೀಸ್ ಠಾಣೆ ವ್ಯಾಪ್ತಿಯ ಯರ್ರಯ್ಯನಹಳ್ಳಿ ಗ್ರಾಮದ ಹನುಮಂತಪ್ಪ ಎನ್ನುವ 23 ವರ್ಷದ ಯುವಕ ಜ.20ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಚೋರನೂರು ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರು ಮನವಿ ಮಾಡಿದ್ದಾರೆ.
ಕಾಣೆಯಾದ ಯುವಕನ ಚಹರೆ: ಎತ್ತರ 5.3 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಉಳ್ಳವನಾಗಿದ್ದು, ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಕಪ್ಪು ತುಂಬು ತೋಳಿನ ಟಿ-ಶರ್ಟ್, ಕಪ್ಪು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾನೆ.
ಮೇಲ್ಕಂಡ ಚಹರೆಯುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಚೋರನೂರು ಪೊಲೀಸ್ ಠಾಣೆಯ ಪಿ.ಎಸ್.ಐ ಮೊ:9480803063 ಸಂಡೂರು ವೃತ್ತದ ಪಿ.ಎಸ್.ಐ ದೂ:08395260100, ಬಳ್ಳಾರಿ ಎಸ್.ಪಿ ದೂ:08392258400, ತೋರಣಗಲ್ಲು ಡಿ.ಎಸ್.ಪಿ ದೂ:08391220326, ಬಳ್ಳಾರಿ ಕಂಟ್ರೋಲ್ ರೂಂ ದೂ:08392279100ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಫೋಟೋ ಇರುವುದಿಲ್ಲ)
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ