ಮಂಗಳವಾರ, ಫೆಬ್ರವರಿ 20, 2024
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಚಂದ್ರಶೇಖರ್ ನಾಯಕ್ ಅಧಿಕಾರ ಸ್ವೀಕಾರ
ಬಳ್ಳಾರಿ,ಫೆ.20(ಕರ್ನಾಟಕ ವಾರ್ತೆ):
ಬಳ್ಳಾರಿ ವಲಯದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಚಂದ್ರಶೇಖರ್ ನಾಯಕ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.
ಇವರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಗ್ರಾಮದವರಾಗಿದ್ದಾರೆ. ಈ ಹಿಂದೆ ಚಾಮರಾಜನಗರ ವಲಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
ನಿಕಟಪೂರ್ವ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ಟಿ.ಹೀರಲಾಲ್ ಅವರು ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ಚಂದ್ರಶೇಖರ್ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ಆದೇಶಿಸಿದೆ ಎಂದು ಪ್ರಕಟಣೆ ತಿಳಿಸಿದೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ