ಸೋಮವಾರ, ಫೆಬ್ರವರಿ 12, 2024

ಬಾಲಕಿ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಫೆ.12(ಕರ್ನಾಟಕ ವಾರ್ತೆ): ತೋರಣಗಲ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಂಬಿಕಾ.ಎನ್ ಎನ್ನುವ 17 ವರ್ಷದ ಬಾಲಕಿ ಫೆ.8ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಠಾಣೆಯ ಠಾಣಾಧಿಕಾರಿಯವರು ಮನವಿ ಮಾಡಿದ್ದಾರೆ. ಕಾಣೆಯಾದ ಬಾಲಕಿಯ ಚಹರೆ: ಎತ್ತರ 4.8 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಟಾಪ್, ಬಿಳಿ ಬಣ್ಣದ ವೇಲ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾಳೆ. ಮೇಲ್ಕಂಡ ಚಹರೆಯುಳ್ಳ ಬಾಲಕಿ ಬಗ್ಗೆ ಮಾಹಿತಿ ಸಿಕ್ಕಲ್ಲಿ ತೋರಣಗಲ್ಲು ಪೊಲೀಸ್ ಠಾಣೆಯ ದೂ:0839525100, ಮೊ:9480803062, ಸಂಡೂರು ವೃತ್ತದ ಪಿ.ಎಸ್.ಐ ದೂ:08395260100, ಮೊ:9480803036, ತೋರಣಗಲ್ಲು ಪೊಲೀಸ್ ಠಾಣೆಯ ಡಿ.ವೈ.ಎಸ್.ಪಿ ಮೊ:9480803010, ಬಳ್ಳಾರಿ ಎಸ್.ಪಿ ದೂ:08392258300, ಬಳ್ಳಾರಿ ಕಂಟ್ರೋಲ್ ರೂಂ ದೂ:08392279100ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ