ಮಂಗಳವಾರ, ಫೆಬ್ರವರಿ 6, 2024
ಉಚಿತ ಆರೋಗ್ಯ ಚಿಕಿತ್ಸಾ ಶಿಬಿರ
ಬಳ್ಳಾರಿ,ಫೆ.06(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೆನಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಮಂಗಳೂರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ, ಸಿರುಗುಪ್ಪ, ಕಂಪ್ಲಿ, ಕುರುಗೋಡು ಮತ್ತು ಸಂಡೂರು ತಾಲೂಕುಗಳಲ್ಲಿ ಅತೀ ಹೆಚ್ಚು ಪರಿಶಿಷ್ಟ ವರ್ಗದ ಜನಸಂಖ್ಯೆ ಹೊಂದಿರುವ ಗ್ರಾಮಗಳಲ್ಲಿ ಫೆ.06 ರಿಂದ 11 ರ ವರೆಗೆ ಉಚಿತ ಆರೋಗ್ಯ ಚಿಕಿತ್ಸಾ ಶಿಬಿರ ಕಾರ್ಯಗಾರವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.
ಜಿಲ್ಲೆಯ ಬುಡಕಟ್ಟು ಪ್ರದೇಶಗಳ ಜನಾಂಗದವರಿಗೆ ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ರಕ್ತನಾಳದ ಕಾಯಿಲೆಗಳು, ಕ್ಯಾನ್ಸರ್, ರಕ್ತಹೀನತೆ ಮತ್ತು ಇತರೆ ಆರೋಗ್ಯ ಸ್ಥಿತಿಯನ್ನು ತಡೆಗಟ್ಟುವಂತಹ ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆ ನಡೆಸುವುದರ ಮೂಲಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಉಚಿತ ಚಿಕಿತ್ಸೆ ನೀಡಲು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಫೆ.06 ರಂದು ಬಳ್ಳಾರಿ ತಾಲ್ಲೂಕು ವ್ಯಾಪ್ತಿಯ ಗೋಡೆಹಾಳ್, ಮೀನಹಳ್ಳಿ, ಕುಂಟನಹಾಳ್, ರಾಯಪುರ, ಬುರ್ರನಾಯಕನಹಳ್ಳಿ ಗ್ರಾಮಗಳಲ್ಲಿ ನಡೆಯಲಿದೆ. ಫೆ.07 ರಂದು ಭೈರದೇವನಹಳ್ಳಿ, ಚಾಗನೂರು, ಸಿಂಧವಾಳ ಗ್ರಾಮಗಳಲ್ಲಿ ನಡೆಯಲಿದೆ.
ಫೆ.08 ರಂದು ಸಿರುಗುಪ್ಪ ತಾಲ್ಲೂಕಿನ ಹಾವಿನಹಾಳ್, ಮಣ್ಣೂರ್ ಗ್ರಾಮಗಳು. ಫೆ.09 ರಂದು ಕುರುಗೋಡು ತಾಲ್ಲೂಕಿನ ಮುಷ್ಟಗಟ್ಟ ಗ್ರಾಮ. ಫೆ.10 ರಂದು ಕಂಪ್ಲಿ ತಾಲ್ಲೂಕಿನ ಜವುಕು ಗ್ರಾಮ. ಫೆ.11 ರಂದು ಸಂಡೂರು ತಾಲ್ಲೂಕಿನ ಮಾಳಪುರ, ಮಲ್ಲಾಪುರ ಗ್ರಾಮಗಳಲ್ಲಿ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ