ಸೋಮವಾರ, ಫೆಬ್ರವರಿ 5, 2024

ಜಿಲ್ಲಾ ಮಟ್ಟದ ಅತ್ಯುತ್ತಮ ಗೋಪಾಲಕರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಫೆ.05(ಕರ್ನಾಟಕ ವಾರ್ತೆ): ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2023-24 ನೇ ಸಾಲಿನಲ್ಲಿ ವಿಸ್ತರಣಾ ಘಟಕ ಬಲಪಡಿಸುವಿಕೆ ಯೋಜನೆಯಡಿ ಜಿಲ್ಲಾ ಮಟ್ಟದ ಅತ್ಯುತ್ತಮ ಗೋಪಾಲಕರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಬಯಸುವ ಗೋಪಾಲಕರು ಆಧುನಿಕ ಪಶುಪಾಲನಾ ಪದ್ದತಿಗಳನ್ನು ಅಳವಡಿಸಿಕೊಂಡಿರಬೇಕು. ಗೋಉತ್ಪನ್ನಗಳ ತಯಾರಿಕೆ ಚಟುವಟಿಕೆಗಳನ್ನು ಕೈಗೊಂಡಿರಬೇಕು. ಅತ್ಯುತ್ತಮ ಗೋಪಾಲಕರಿಗೆ ಬಹುಮಾನ ಮತ್ತು ಪಾರಿತೋಷಕ ಪ್ರಶಸ್ತಿ ಒಳಗೊಂಡಿರುತ್ತದೆ. ಅರ್ಜಿಗಳನ್ನು ಆಯಾ ತಾಲ್ಲೂಕು ಮಟ್ಟದ ಪಶು ಆಸ್ಪತ್ರೆಯಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಫೆ.12 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ 5 ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಬಳ್ಳಾರಿ-9448233756, ಸಿರುಗುಪ್ಪ-7892855573, ಸಂಡೂರು-9108334846, ಕುರುಗೋಡು-9916503138 ಹಾಗೂ ಕಂಪ್ಲಿ-9964444527 ಗೆ ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ