ಶನಿವಾರ, ಫೆಬ್ರವರಿ 17, 2024
ಹೋಟೆಲ್ ಮ್ಯಾನೇಜ್‍ಮೆಂಟ್ ತರಬೇತಿ: ನೋಂದಣಿಗೆ ಆಹ್ವಾನ
ಬಳ್ಳಾರಿ,ಫೆ.17(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶದ ನಿರುದ್ಯೋಗ ಯುವಕ, ಯುವತಿಯರಿಗೆ ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದಲ್ಲಿ ಆಸಕ್ತಿವುಳ್ಳವರಿಗೆ 45 ದಿನಗಳ ತರಬೇತಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಹೋಟೆಲ್ ಮ್ಯಾನೇಜ್‍ಮೆಂಟ್ ಕ್ಷೇತ್ರದ ಹೌಸ್‍ಕೀಪಿಂಗ್ ಅಟೆಂಡೆಂಟ್ ಮತ್ತು ಫುಡ್, ಬೆವರೇಜ್ ಸರ್ವೀಸ್-ಸ್ಟೆವಾರ್ಡ್ ಜಾಬ್‍ರೋಲ್‍ಗಳಲ್ಲಿ ಸೂಕ್ತ ತರಬೇತಿಯನ್ನು ನೀಡಿ ಉದ್ಯೋಗಾವಕಾಶ ಕಲ್ಪಿಸಲು ಉದ್ದೇಶಿಸಲಾಗಿದೆ.
ತರಬೇತಿ ಅವಧಿಯಲ್ಲಿ ಬಳ್ಳಾರಿ ನಗರ ಹಾಗೂ ಜಿಲ್ಲೆಯ ಗ್ರಾಮೀಣ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಕಲ್ಪಿಸಲಾಗುವುದು. ತರಬೇತಿ ಪೂರ್ಣಗೊಳಿಸಿದ ನಂತರ ಪ್ರಮಾಣ ಪತ್ರವನ್ನು ನೀಡಲಾಗುವುದು.
*ಅರ್ಹತೆಗಳು:*
ಅಭ್ಯರ್ಥಿಗಳು ಬಳ್ಳಾರಿ ಜಿಲ್ಲೆಯ ನಿವಾಸಿಯಾಗಿರಬೇಕು. ಅಭ್ಯರ್ಥಿಗಳು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದಿರಬೇಕು. ವಯೋಮಿತಿ 18 ರಿಂದ 30 ವರ್ಷದ ಒಳಗಿರಬೇಕು. ಅಭ್ಯರ್ಥಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮತ್ತು ಸಾಮಾನ್ಯ ವರ್ಗಕ್ಕೆ ಸೇರಿದವರಾಗಿರಬೇಕು. 45 ದಿನಗಳ ಕಡ್ಡಾಯ ತರಬೇತಿಯನ್ನು ಪಡೆಯಬೇಕು.
ಆಸಕ್ತ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು hಣಣಠಿ://ಣiಟಿಥಿuಡಿಟ.ಛಿom/2ಠಿ9xeಡಿzb ಈ ಲಿಂಕ್‍ಗೆ ಭೇಟಿ ನೀಡಿ ಫೆ.26 ರೊಳಗಾಗಿ ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಹೊಸ ಜಿಲ್ಲಾಡಳಿತ ಭವನದ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಅಥವಾ ಮೊ:9844444958 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ