ಶುಕ್ರವಾರ, ಫೆಬ್ರವರಿ 23, 2024

ಮಹಿಳೆ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಫೆ.23(ಕರ್ನಾಟಕ ವಾರ್ತೆ): ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ ಗೌಳೇರಹಟ್ಟಿಯ 30 ವರ್ಷದ ಸುಜಾತ ಎಂಬ ಮಹಿಳೆ ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಮನವಿ ಮಾಡಿದ್ದಾರೆ. ಕಾಣೆಯಾದ ಮಹಿಳೆ ಚಹರೆ: ಎತ್ತರ 5 ಅಡಿ, ಗೋಧಿ ಮೈಬಣ್ಣ, ದುಂಡು ಮುಖ, ದಪ್ಪ ಮೈಕಟ್ಟು ಹೊಂದಿರುತ್ತಾಳೆ. ಕಾಣೆಯಾದ ಸಂಧರ್ಭದಲ್ಲಿ ಬೂದು ಬಿಳಿ, ಕೆಂಪು ಮಿಶ್ರಣ ಬಣ್ಣದ ಚೂಡಿದಾರ ಧರಿಸಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಈ ಮೇಲ್ಕಂಡ ಚಹರೆ ಗುರುತುಳ್ಳ ಮಹಿಳೆ ಕಾಣಿಸಿದ್ದಲ್ಲಿ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಮೊ:9902379639 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ