ಶುಕ್ರವಾರ, ಫೆಬ್ರವರಿ 23, 2024
ವಿದ್ಯಾರ್ಥಿವೇತನಕ್ಕಾಗಿ ಪೆÇೀಷಕರ ಆದಾಯ ಪ್ರಮಾಣಪತ್ರ ಸಲ್ಲಿಸಲು ಫೆ.29 ರವರೆಗೆ ಅವಕಾಶ
ಬಳ್ಳಾರಿ,ಫೆ.23(ಕರ್ನಾಟಕ ವಾರ್ತೆ):
2023-24 ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೆÇೀಷಕರ ಆದಾಯವು ರೂ.2.5 ಲಕ್ಷ ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೆÇೀಷಕರ ಆದಾಯ ಪ್ರಮಾಣಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ವಿದ್ಯಾರ್ಥಿಗಳ ಲಾಗಿನ್‍ನಲ್ಲಿ ಸಲ್ಲಿಸಲು ಫೆ.29 ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ