ಶನಿವಾರ, ಮಾರ್ಚ್ 2, 2024
ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ವಿಶೇಷ ಸಾರಿಗೆ ಬಸ್ ಸೌಲಭ್ಯ ಮಾ.04 ರಿಂದ
ಬಳ್ಳಾರಿ,ಮಾ.02(ಕರ್ನಾಟಕ ವಾರ್ತೆ):
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದಿಂದ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ತೆರಳುವ ಭಕ್ತಾಧಿಗಳಿಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ.
ಬಳ್ಳಾರಿ, ಮೋಕಾ, ಕುರುಗೋಡು, ಸಿರುಗುಪ್ಪ, ತೆಕ್ಕಲಕೋಟ, ಹಳೇಕೋಟೆ ಮತ್ತು ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲಂಗೆ ಹೋಗುತ್ತಿದ್ದು, ಭಕ್ತಾಧಿಗಳ ಅನುಕೂಲಕ್ಕಾಗಿ ಮಾ.04 ರಿಂದ 10 ರ ವರೆಗೆ ವಿಶೇಷ ಸಾರಿಗೆ ಸೌಕರ್ಯ ಒದಗಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ-1ನೇ ಘಟಕದ ವ್ಯವಸ್ಥಾಪಕರ ಮೊ.7760992163, ಬಳ್ಳಾರಿ-2ನೇ ಘಟಕದ ವ್ಯವಸ್ಥಾಪಕರ ಮೊ.7760992164, ಸಿರುಗುಪ್ಪ ಘಟಕದ ವ್ಯವಸ್ಥಾಪಕರ ಮೊ.7760992165, ಕುರುಗೋಡು ಘಟಕದ ವ್ಯವಸ್ಥಾಪಕರ ಮೊ.9606483671 ಗೆ ಸಂಪರ್ಕಿಸಬಹುದು.
ಈ ಸಾರಿಗೆ ಸೇವೆಯನ್ನು ಸಾರ್ವಜನಿಕ ಪ್ರಯಾಣಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಕರಸಾ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‍ಬಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ