ಸೋಮವಾರ, ಮಾರ್ಚ್ 4, 2024
ರಾಜ್ಯ ಮಟ್ಟದ ಪ್ಯಾರಾ ಸ್ವಿಮ್ಮಿಂಗ್ ಚಾಂಪಿಯನ್‍ಶಿಪ್: ಬಳ್ಳಾರಿ ಜಿಲ್ಲೆಗೆ 13 ಚಿನ್ನ, 2 ಬೆಳ್ಳಿ
ಬಳ್ಳಾರಿ,ಮಾ.04(ಕರ್ನಾಟಕ ವಾರ್ತೆ):
ಬೆಂಗಳೂರಿನ ವೈಟ್‍ಫೀಲ್ಡ್‍ನ ಜೀ ಸ್ವಿಮ್ ಅಕಾಡೆಮಿಯಲ್ಲಿ ಶನಿವಾರ (ಮಾ.02) ದಂದು ನಡೆದ 2023-24 ನೇ ಸಾಲಿನ ರಾಜ್ಯ ಮಟ್ಟದ ಪ್ಯಾರಾ ಸ್ವಿಮ್ಮಿಂಗ್ ಚಾಂಪಿಯನ್‍ಶಿಪ್ ಸ್ಪಧೆಗಳಲ್ಲಿ ಬಳ್ಳಾರಿ ಜಿಲ್ಲೆಗೆ ಒಟ್ಟು 13 ಚಿನ್ನದ ಪದಕ, 2 ಬೆಳ್ಳಿ ಪದಕಗಳನ್ನು ಲಭಿಸಿವೆ.
ಬಳ್ಳಾರಿ ಜಿಲ್ಲೆಯನ್ನು ಪ್ರತಿನಿಧಿಸಿ, ಈಜು ಸ್ಪರ್ಧಿಗಳಾದ ಗೋಪಿಚಂದ್, ಯೋಜಿತ್, ಸಾಯಿ ಬೇಬಿ, ಸಾಯಿ ನಿಖಿಲ್, ಕೆ.ಕವಿತಾ ಅವರು ಭಾಗವಹಿಸಿದ್ದರು.
ಈಜುಸ್ಪರ್ಧೆಯ ವಿವಿಧ ವಿಭಾಗಗಳಲ್ಲಿ ಗೋಪಿಚಂದ್ ಅವರಿಗೆ 3 ಚಿನ್ನದ ಪದಕ, ಯೋಜಿತ್‍ಗೆ 3 ಚಿನ್ನದ ಪದಕ, ಸಾಯಿ ಬೇಬಿ ಅವರಿಗೆ 3 ಚಿನ್ನದ ಪದಕ, ಸಾಯಿ ನಿಖಿಲ್‍ಗೆ 2 ಚಿನ್ನ ಹಾಗೂ 1 ಬೆಳ್ಳಿ ಪದಕ ಮತ್ತು ಕೆ.ಕವಿತಾ ಅವರಿಗೆ 2 ಚಿನ್ನ ಹಾಗೂ 1 ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.
ರಜನಿ ಲಕ್ಕ, ಸ್ವಾಮಿ, ಶರತ್ ಗಾಯಕ್‍ವಾಡ್(ಅರ್ಜುನ ಪ್ರಶಸ್ತಿ ಪುರಸ್ಕøತ) ಇವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದುಕೊಂಡಿದ್ದರು.
*ರಾಷ್ಟ್ರ ಮಟ್ಟಕ್ಕೆ ಆಯ್ಕೆ:*
ಇದೇ ಮಾರ್ಚ್ 29 ರಿಂದ 31 ರ ವರೆಗೆ ಮಧ್ಯಪ್ರದೇಶದ ಗ್ವಾಲಿಯರ್‍ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪ್ಯಾರಾ ಸ್ವಿಮ್ಮಿಂಗ್ ಚಾಂಪಿಯನ್‍ಶಿಪ್ ಕ್ರೀಡೆಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಭಾಗವಹಿಸುವರು.
ಈಜುಪಟುಗಳ ಈ ಉತ್ತಮ ಸಾಧನೆಗೆ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಗ್ರೇಸಿ ಅವರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ