ಬುಧವಾರ, ಮಾರ್ಚ್ 13, 2024

ಮಾ.14, 15 ರಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

ಬಳ್ಳಾರಿ,ಮಾ.13(ಕರ್ನಾಟಕ ವಾರ್ತೆ): ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಮಾ. 14 ಮತ್ತು 15 ರಂದು ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ “ವ್ಯಾಪಾರದಲ್ಲಿ ಸ್ಥಿತಿ ಸ್ಥಾಪಕತ್ವದ ನವ ಪ್ರವೃತ್ತಿ” ಎಂಬ ವಿಷಯ ಕುರಿತು ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮವನ್ನು ವಿವಿಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಭಾರತ ಚಾರ್ಟರ್ಡ್ ಅಕೌಂಟೆಂಟ್ಸ್, ದಕ್ಷಿಣ ಭಾರತ ಪ್ರಾದೇಶಿಕ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಸಿ.ಎ.ಪನ್ನಾರಾಜ್.ಎಸ್ ಅವರು ಸಮ್ಮೇಳನವನ್ನು ಉದ್ಘಾಟಿಸುವರು. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ಅಂತಾರಾಷ್ಟ್ರೀಯ ಕಾರ್ಯಕ್ರಮಗಳು ಮತ್ತು ಪಾಲುದಾರಿಕೆಗಳು ನಿಕಾಯದ ಡೀನರಾದ ಡಾ.ಎಸ್.ರಮೇಶ್ ಸಮ್ಮೇಳನದ ಮುಖ್ಯ ಭಾಷಣ ಮಾಡುವರು. ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಕೆ.ಎಂ.ಮೇತ್ರಿ ಅವರು ಅಧ್ಯಕ್ಷತೆ ವಹಿಸುವರು. ಕುಲಸಚಿವರಾದ ರುದ್ರೇಶ್.ಎಸ್.ಎನ್., ಕುಲಸಚಿವರ (ಮೌಲ್ಯಮಾಪನ) ಪ್ರೊ.ರಮೇಶ್ ಓಲೇಕಾರ್, ವಿತ್ತಾಧಿಕಾರಿ ಪ್ರೊ. ಸದ್ಯೋಜಾತಪ್ಪ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಂಘಟನಾ ಕಾರ್ಯದರ್ಶಿ ಸಿಎಮ್‍ಎ ಡಾ.ಜೀಲಾನ್ ಭಾಷಾ.ವಿ ಮತ್ತು ವಿಭಾಗದ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿರುವರು. ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನದಲ್ಲಿ ರಾಜ್ಯದ 200ಕ್ಕೂ ಹೆಚ್ಚು ಪ್ರತಿನಿಧಿಗಳು ಸಮ್ಮೇಳನದಲ್ಲಿ ತಮ್ಮ ಸಂಶೋಧನಾ ಪಾಂಡಿತ್ಯದ ಕುರಿತು ಪ್ರಬಂಧ ಮಂಡಿಸಲಿದ್ದಾರೆ ಎಂದು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ