ಶುಕ್ರವಾರ, ಮಾರ್ಚ್ 15, 2024
ಮಾ.17 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಮಾ.15(ಕರ್ನಾಟಕ ವಾರ್ತೆ):
ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 11ಕೆ.ವಿ ಮಾರ್ಗಗಳ ಮರು ಹೊಂದಿಸುವÀ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 220/110/11 ಕೆ.ವಿ ಅಲ್ಲೀಪುರ ಸ್ವೀಕರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ನಾಲ್ಕು 11ಕೆ.ವಿ ಮಾರ್ಗಗಳಲ್ಲಿ ಮಾ.17 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳಿವು:*
ಎಫ್-32 ಐ.ಪಿಸೆಟ್ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ, ಅಲ್ಲೀಪುರ ಐ.ಪಿ ಸೆಟ್‍ಗಳು. ಎಫ್-37 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಫೀಡರ್ ಮಾರ್ಗದ ಬೆಳಗಲ್ಲು ಗ್ರಾಮ, ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ. ಎಫ್-38 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಫೀಡರ್ ಮಾರ್ಗದ ಬೆಳಗಲ್ಲು ತಾಂಡ, ಕೈಗಾರಿಕಾ ಪ್ರದೇಶ, ತುಮಟಿ ರಸ್ತೆ. ಎಫ್-71 ಹರಗಿನದೋಣಿ ಎನ್.ಜೆ.ವೈ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ, ಅಲ್ಲೀಪುರ ಮುಂತಾದ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಮೋಹನ್‍ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ