ಶುಕ್ರವಾರ, ಮಾರ್ಚ್ 15, 2024

ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ಮಾ.17 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮಾ.16(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂನ 110ಕೆ.ವಿ ಅಲ್ಲಿಪುರ-ಬಳ್ಳಾರಿ ಉತ್ತರ ಮಾರ್ಗದ ಲಿಲೋ ನಿರ್ಮಾಣ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಶ್ರೀಧರಗಡ್ಡೆ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ಮಾ.17 ರಂದು ಬೆಳಿಗ್ಗೆ 08 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಎಫ್-1 ಎನ್.ಜೆ.ವೈ ಬಾಲಾಜಿ ನಗರ್ ಕ್ಯಾಂಪ್ ಮಾರ್ಗದ ಕೊರ್ಲಗುಂದಿ, ವಿಜಯನಗರ ಕ್ಯಾಂಪ್, ಜಾಲಿಬೆಂಜಿ, ಬಾಲಾಜಿ ನಗರ ಕ್ಯಾಂಪ್, ಜ್ಯಾಲಿಬೆಂಜಿ. ಎಫ್-2 ಐ.ಪಿ ಸೆಟ್ ಫೀಡರ್ ಸೋಮಸಮುದ್ರ ಮಾರ್ಗದ ವಕ್ರಾಣಿ ಕ್ಯಾಂಪ್, ಲಕ್ಷ್ಮಿನಗರ ಕ್ಯಾಂಪ್, ವೀರಾಂಜಿನೇಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್ ಹಾಗೂ ಮುಂತಾದ ಗ್ರಾಮಗಳು. ಎಫ್-3 ಶ್ರೀಧರಗಡ್ಡೆ ಎನ್.ಜೆ.ವೈ ಫೀಡರ್ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷ್ಮಿನಗರ ಕ್ಯಾಂಪ್, ವೀರಾಂಜಿನೇಯ ಕ್ಯಾಂಪ್, ಕೋಳೂರು, ಮದಿರೆ, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್ ಹಾಗೂ ಗ್ರಾಮಗಳು, ಕೋಳೂರು ಕ್ರಾಸ್, ದಮ್ಮೂರು, ಡಿ.ಕಗ್ಗಲ್, ವಿ.ಟಿ.ಕ್ಯಾಂಪ್. ಎಫ್-4 ಐ.ಪಿ ಸೆಟ್ ಕೊರ್ಲಗುಂದಿ ಫೀಡರ್ ಮಾರ್ಗದ ಕೊರ್ಲಗುಂದಿ, ಬಾಲಾಜಿನಗರ ಕ್ಯಾಂಪ್, ಜ್ಯಾಲಿಬೆಂಜಿ, ಶ್ರೀಧರಗಡ್ಡ, ವಿಜಯನಗರ ಕ್ಯಾಂಪ್. ಎಫ್-5 ಡಾಕ್ಟರ್ ಕ್ಯಾಂಪ್ ಮಾರ್ಗದ ಶ್ರೀಧರಗಡ್ಡೆ, ಗುಡಾರ್ ನಗರ. ಎಫ್-01 ಡಿ.ಕಗ್ಗಲ್ ಐಪಿ ಮಾರ್ಗದ ಡಿ.ಕಗ್ಗಲ್ ಗ್ರಾಮ, ಎಫ್-02 ಗುಡುದೂರು ಐಪಿ ಮಾರ್ಗದ ಗುಡುದೂರು, ಹಂದಿಹಾಳ್ ಗ್ರಾಮ, ಎಫ್-03 ಹಂದಿಹಾಳ್ ಐಪಿ ಮಾರ್ಗದ ಹಂದಿಹಾಳ್ ಗ್ರಾಮ, ಚಾನಾಳ್, ಎಫ್-04 ಗುಡುದೂರು ಎನ್.ಜೆ.ವೈ ಮಾರ್ಗದ ಹಂದಿಹಾಳ್, ಚಾನಾಳ್, ಗುಡುದೂರು, ಎಫ್-05 ಚಾನಾಳ್ ಐಪಿ ಮಾರ್ಗದ ಚಾನಾಳ್ ಗ್ರಾಮ ಸೇರಿದಂತೆ ಮುಂತಾದ ಕಡೆ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್‍ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ