ಶನಿವಾರ, ಮಾರ್ಚ್ 16, 2024
ಮಾ.17 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಮಾ.16(ಕರ್ನಾಟಕ ವಾರ್ತೆ):
ನಗರದ ಉಪವಿಭಾಗ-2ರ ವ್ಯಾಪ್ತಿಗೆ ಒಳಪಡುವ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದ ನಿರ್ವಹಣೆ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಂಡಿರುವುದರಿಂದ ಮಾ.17 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಗರದ ಕೆಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಜೆಸ್ಕಾಂನ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಅಶೋಕ ರೆಡ್ಡಿ ಅವರು ತಿಳಿಸಿದ್ದಾರೆ.
*ವಿದ್ಯುತ್ ಕಡಿತಗೊಳ್ಳುವ ಪ್ರದೇಶಗಳು:*
ಎಫ್-6 ಫೀಡರ್‍ನ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‍ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಹವಂಬಾವಿ.
ಎಫ್-10 ಫೀಡರ್‍ನ ಅಶೋಕ ನಗರ, ಹವಂಭಾವಿ, ಟಿ.ಎಂ.ಜಿ ಲೇಔಟ್, ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ, ಗಣೇಶ ನಗರ. ಎಫ್-14 ಫೀಡರ್‍ನ ಜಿಲ್ಲಾ ಕೋರ್ಟ್ ಸಂಕೀರ್ಣ.ಎಫ್-12 ಫೀಡರ್‍ನ ನಿಜಲಿಂಗಪ್ಪ ಕಾಲೋನಿ, ಲಲಿತಾ ಲೇಔಟ್, ಗೊಲ್ಲರ ನರಸಪ್ಪ ಕಾಲೋನಿ, ರಾಗವೇಂದ್ರ ಕಾಲೋನಿ 2ನೇ ಹಂತ, ದೀಪಕ್ ಕಾಲೋನಿ, ಕೆವಿಟಿ ನಗರ, ವೆಂಕಟೇಶ್ವರ ನಗರ, ಅನಂತಪುರ ರಸ್ತೆ, ಶೆಕ್ಷಾವಲಿ ದುರ್ಗಾ, ಕಬೇರ ಲೇಔಟ್.
ಈ ಮೇಲ್ಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ