ಮಂಗಳವಾರ, ಮಾರ್ಚ್ 19, 2024
ಮಾ.21 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಮಾ.19(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಗ್ರಾಮೀಣ ಉಪ-ವಿಭಾಗದ ಕಾರ್ಯ ಮತ್ತು ಪಾಲನಾ ಘಟಕ-2 ರ ವ್ಯಾಪ್ತಿಯಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬಗಳನ್ನು ಬದಲಾಯಿಸುವ ಕಾಮಗಾರಿ ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಬಿಸಿಲಹಳ್ಳಿ ಉಪಕೇಂದ್ರ ಮತ್ತು 33/11ಕೆ.ವಿ ರೂಪನಗುಡಿ ವಿದ್ಯುತ್ ಉಪ-ಕೇಂದ್ರದಡಿ ಬರುವ ಪ್ರದೇಶಗಳಲ್ಲಿ ಮಾ.21 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನ್ ಬಾಬು ಅವರು ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-52 ಶಂಕರಬಂಡೆ ಐಪಿ ಫೀಡರ್ ಮಾರ್ಗದ ತಿರುಮಲನಗರ, ಶಂಕರಬಂಡೆ, ಬಬ್ಬುಕುಂಟೆ, ಇಬ್ರಾಹಿಂಪುರ, ಎತ್ತಿನಬೂದಿಹಾಳ್, ಬೆಂಚಿಕೊಟ್ಟಾಲ್, ಕಮ್ಮರಚೇಡು ಪ್ರದೇಶಗಳು. ಎಫ್-56 ಕಮ್ಮರಚೇಡು ಎನ್.ಜೆ.ವೈ ಮಾರ್ಗದ ತಲಮಾಮಿಡಿ, ಕಮ್ಮರಚೇಡು, ಬಿಸಲಹಳ್ಳಿ, ಜನತಾನಗರ, ತೆಗ್ಗಿನಬೂದಿಹಾಳ್, ಅಮರಾಪುರ, ಬೇವಿನಹಳ್ಳಿ, ಅಸುಂಡಿ, ಕಕ್ಕಬೇವಿನಹಳ್ಳಿ ಪ್ರದೇಶಗಳು.
ಎಫ್-95 ರೂಪನಗುಡಿ ಐಪಿ ಮಾರ್ಗದ ರೂಪನಗುಡಿ, ರಾಯಾಪುರ, ಕುಂಟನಹಾಳ್ ಪ್ರದೇಶಗಳು. ಎಫ್-96 ರೂಪನಗುಡಿ ಎನ್‍ಜೆವೈ ಮಾರ್ಗದ ರೂಪನಗುಡಿ, ರಾಯಾಪುರ, ಕುಂಟನಹಾಳ್ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ