ಬುಧವಾರ, ಮಾರ್ಚ್ 20, 2024
ಮಾ.22 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಮಾ.20(ಕರ್ನಾಟಕ ವಾರ್ತೆ):
ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 220/110/11ಕೆ.ವಿ ಅಲ್ಲೀಪುರ ಸ್ವೀಕರಣ ಕೇಂದ್ರದ 20ಎಮ್.ವಿಎ ಪರಿವರ್ತಕ-1 ಮತ್ತು 2ರ ಆಯಿಲ್ ಸೋರಿಕೆಯ ತಡೆಗಟ್ಟುವ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಮಾ.22 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 04 ಗಂಟೆಯವರೆಗೆ 220/110/11ಕೆ.ವಿ ಅಲ್ಲೀಪುರ ಸ್ವೀಕರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್‍ಬಾಬು ಅವರು ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-37 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಫೀಡರ್ ಮಾರ್ಗದ ಬೆಳಗಲ್ಲು ಗ್ರಾಮ, ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ. ಎಫ್-38 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಫೀಡರ್ ಮಾರ್ಗದ ಬೆಳಗಲ್ಲು ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ. ಎಫ್-39 ಆಲ್ಲಿಪುರ ನಗರಪ್ರದೇಶ ಫೀಡರ್ ಮಾರ್ಗದ ಅಲ್ಲೀಪುರ ಗ್ರಾಮ, ಬೈ ಪಾಸ್ ರಸ್ತೆ. ಎಫ್-74 ಗೌತಮ್ ನಗರ ಎನ್.ಜೆ.ವೈ ಫೀಡರ್ ಮಾರ್ಗದ ಡಿಸಿ ನಗರ, ಪ್ರ್ರಶಾಂತ ಆಲದಹಳ್ಳಿ ಹಾಗೂ ಮುಂತಾದ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು, ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ