ಶುಕ್ರವಾರ, ಮಾರ್ಚ್ 22, 2024

ಮಾ.24 ರಂದು ‘ವಿಶ್ವ ಕ್ಷಯರೋಗ ದಿನಾಚರಣೆ’

ಬಳ್ಳಾರಿ,ಮಾ.22(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ವತಿಯಿಂದ ‘ವಿಶ್ವ ಕ್ಷಯರೋಗ ದಿನಾಚರಣೆ’ ಅಂಗವಾಗಿ ಸಾರ್ವಜನಿಕರಲ್ಲಿ ಕ್ಷಯರೋಗದ ಬಗ್ಗೆ ಅರಿವು ಮೂಡಿಸಲು ಮಾ.24 ರಂದು ಬೆಳಿಗ್ಗೆ 08 ಗಂಟೆಗೆ ಜಾಥಾ ಮತ್ತು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಡಿ.ಎನ್.ಬಿ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ವಿ.ಇಂದ್ರಾಣಿ ಅವರು ತಿಳಿಸಿದ್ದಾರೆ. ಜಾಥಾವು ಜಿಲ್ಲಾ ಆಸ್ಪತ್ರೆಯಿಂದ ಆರಂಭವಾಗಿ ರಾಯಲ್ ವೃತ್ತದವರೆಗೆ ಹಾಗೂ ರಾಯಲ್ ವೃತ್ತದಿಂದ ಜಿಲ್ಲಾ ಆಸ್ಪತ್ರೆಯವರೆಗೆ ಮರಳಲಿದೆ. ವೇದಿಕೆ ಕಾರ್ಯಕ್ರಮದಲ್ಲಿ 2023 ನೇ ಸಾಲಿಗೆ ಎನ್.ಟಿ.ಇ.ಪಿ ಕಾರ್ಯಕ್ರಮದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೈ.ರಮೇಶ್‍ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ