ಸೋಮವಾರ, ಮಾರ್ಚ್ 25, 2024

ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ: ಕನ್ನಡ ಭಾಷಾ ವಿಷಯ ಪರೀಕ್ಷೆಗೆ 265 ವಿದ್ಯಾರ್ಥಿಗಳು ಗೈರು

ಬಳ್ಳಾರಿ, ಮಾ.25(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಿದ್ದು, ಜಿಲ್ಲೆಯ ಒಟ್ಟು 61 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದೆ. ಮಾ.25 ರಂದು ಸೋಮವಾರ ಕನ್ನಡ ಭಾಷಾ ವಿಷಯ ಪರೀಕ್ಷೆ ನಡೆದಿದ್ದು, ಜಿಲ್ಲೆಯಲ್ಲಿ 21,461 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು. ಈ ಪೈಕಿ 21,196 ವಿದ್ಯಾರ್ಥಿಗಳು ಹಾಜರಾಗಿದ್ದು, 265 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ (ಆಡಳಿತ) ಉಮಾದೇವಿ ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ