ಮಂಗಳವಾರ, ಮಾರ್ಚ್ 26, 2024

ಮಾ.27 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಮಾ.26(ಕರ್ನಾಟಕ ವಾರ್ತೆ): ನಗರ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರಕ್ಕೆ ನೂತನ 110 ಕೆವಿ ಮಾರ್ಗದ ಜೋಡಣೆ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ 11 ಕೆ.ವಿ.ಫೀಡರ್‍ನ ವಿವಿಧ ಪ್ರದೇಶಗಳಲ್ಲಿ ಮಾ.27 ರಂದು ಬೆಳಿಗ್ಗೆ 07 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ತಿಳಿಸಿದ್ದಾರೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಎಫ್-6 ಫೀಡರ್ ವ್ಯಾಪ್ತಿಯ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‍ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರಸ್ತೆ, ರಾಮನಗರ, ಹವಂಬಾವಿ. ಎಫ್-10 ಫೀಡರ್ ವ್ಯಾಪ್ತಿಯ ಅಶೋಕ ನಗರ, ಹವಂಭಾವಿ, ಟಿ.ಎಂ.ಜಿ ಲೇಔಟ್, ರಾಮನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರ. ಎಫ್-14 ಫೀಡರ್‍ನ ಜಿಲ್ಲಾ ಕೋರ್ಟ್ ಸಂಕೀರ್ಣ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ