ಮಂಗಳವಾರ, ಮಾರ್ಚ್ 26, 2024
ವಿಮ್ಸ್: ಮಾ.28 ರಂದು 63ನೇ ಪದವಿ ಪ್ರದಾನ ಸಮಾರಂಭ
ಬಳ್ಳಾರಿ,ಮಾ.26(ಕರ್ನಾಟಕ ವಾರ್ತೆ):
ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ 63ನೇ ಪದವಿ ಪ್ರದಾನ ಸಮಾರಂಭವು ಮಾ.28 ರಂದು ಬೆಳಿಗ್ಗೆ 10 ಗಂಟೆಗೆ ವಿಮ್ಸ್‍ನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಮಾರಂಭದಲ್ಲಿ ಪ್ರಧಾನ ಪೋಷಕರಾದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಹ್ಸಿನ್ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ.ಎಂ.ಕೆ. ರಮೇಶ್ ಅವರು ಆಗಮಿಸುವರು.
ಸಮಾರಂಭದ ಜಿಲ್ಲಾಧಿಕಾರಿ ಹಾಗೂ ವಿಮ್ಸ್ ಆಡಳಿತ ಮಂಡಳಿಯ ಸದಸ್ಯರಾದ ಪ್ರಶಾಂತ್ ಕುಮಾರ್ ಮಿಶ್ರಾ, ಸಹ ಪೋಷಕರಾಗಿ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಡಾ.ಬಿ.ಎಲ್.ಸುಜಾತ ರಾಥೋಡ್, ಅವರು ಉಪಸ್ಥಿತರಿರುವರು.
ತಮಿಳುನಾಡು ಸರ್ಕಾರದ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಚಂದ್ರಮೋಹನ್.ಬಿ, ಯು.ಎಸ್.ಎ.ನ ವಾಸ್ಕ್ಯುಲರ್ ಶಸ್ತ್ರ ಚಿಕಿತ್ಸಕರಾದ ಡಾ.ಪಿ.ವಿ.ಪತಂಜಲಿ ಶರ್ಮಾ ಹಾಗೂ ಕರ್ನಾಟಕ ವೈದ್ಯಕೀಯ ಮಂಡಳಿಯ ಸದಸ್ಯರಾದ ಡಾ.ವೈ.ಸಿ ಯೋಗಾನಂದ ರೆಡ್ಡಿ ಅವರು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ವಿಮ್ಸ್‍ನ ಡೀನ್ ಹಾಗೂ ನಿರ್ದೇಶಕ ಡಾ.ಟಿ.ಗಂಗಾಧರ ಗೌಡ ಅವರು ಅಧ್ಯಕ್ಷತೆ ವಹಿಸುವರು.
ವಿಮ್ಸ್‍ನ ಪ್ರಾಚಾರ್ಯರಾದ ಡಾ.ಕೃಷ್ಣಸ್ವಾಮಿ.ಡಿ, ವಿಮ್ಸ್‍ನ ಮುಖ್ಯ ಆಡಳಿತಾಧಿಕಾರಿ ಶೀಲವಂತ ಶಿವಕುಮಾರ್ ಸೇರಿದಂತೆ ಉಪನ್ಯಾಸ ವೃಂದ, ಸಿಬ್ಬಂದಿ ವರ್ಗ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಉಪಸ್ಥಿತರಿರುವರು ಎಂದು ವಿಮ್ಸ್ ಪ್ರಕಟಣೆ ತಿಳಿಸಿದೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ