ಸೋಮವಾರ, ಮಾರ್ಚ್ 11, 2024

ರಾಮಕೃಷ್ಣ ವಿದ್ಯಾಶಾಲೆಯಲ್ಲಿ 8ನೇ ತರಗತಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

ಬಳ್ಳಾರಿ,ಮಾ.11(ಕರ್ನಾಟಕ ವಾರ್ತೆ): ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಅನೈರ್ಮಲ್ಯಕರ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ ಗಂಡು ಮಕ್ಕಳಿಗೆ ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಯಲ್ಲಿ 8ನೇ ತರಗತಿ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಿಂದ ಅರ್ಹ 04 ವಿದ್ಯಾರ್ಥಿಗಳಿಗೆ ಸೌಲಭ್ಯವಿದ್ದು, ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನೀಡಲಾಗುವುದು. ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಅರ್ಜಿಯೊಂದಿಗೆ 6 ಮತ್ತು 7 ನೇ ತರಗತಿಯ ಅಂಕಪಟ್ಟಿ ಹಾಗೂ ಇತರೆ ದಾಖಲೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮಾ.15 ಕೊನೆಯ ದಿನವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ