ಗುರುವಾರ, ಮಾರ್ಚ್ 14, 2024

ಕೌಶಲ್ಯಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ವಾರ್ತೆ,ಮಾ.14(ಕರ್ನಾಟಕ ವಾರ್ತೆ): ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಠ ಪಂಗಡದ ನಿರುದ್ಯೋಗಿ ಯುವಕ ಯುವತಿಯರಿಗೆ 2023-24ನೇ ಸಾಲಿನ ಕೌಶಲ್ಯಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಆಸಕ್ತ ಅರ್ಹ ಅಭ್ಯರ್ಥಿಗಳು ಮಾ.28ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಕೌಶಲ್ಯಭಿವೃದ್ಧಿ ತರಬೇತಿಯಡಿ 60 ದಿನಗಳ ಸ್ವಯಂ ಉದ್ಯೋಗದ ಟೈಲರ್, ಹಾಗೂ 30 ದಿನಗಳ ಬೋಟಿಕ್, ಸಹಾಯಕ ಕೂದಲು ಚಿಕಿತ್ಸಕ, ವಸ್ತ್ರ ವಿನ್ಯಾಸಕಾರ, ಯಂತ್ರಾಂಶ ದುರಸ್ತಿ ತಂತ್ರಜ್ಞ, ಹೇರ್ ಸ್ಟೈಲಿಸ್ಟ್, ಸೌಂದರ್ಯ ಚಿಕಿತ್ಸಕ, ಡೇಟಾ ಎಂಟ್ರಿ ಆಪರೇಟರ್, ಸೌರ ಫಲಕ ಸ್ಥಾಪನೆ ಮತ್ತು ಸೇವೆಗಳ ತರಬೇತಿಯನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ:08392245551/52ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ