ಶುಕ್ರವಾರ, ಮಾರ್ಚ್ 15, 2024

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬಳ್ಳಾರಿ,ಮಾ.15(ಕರ್ನಾಟಕ ವಾರ್ತೆ): ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸ್‍ಸಿ) ಗಳ 2024-25 ನೇ ಶೈಕ್ಷಣಿಕ ಸಾಲಿಗೆ 6 ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಮಾ.31 ರ ವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಆಸಕ್ತಿಯುಳ್ಳ ಐದನೇ ತರಗತಿ ಉತ್ತೀರ್ಣ ಹೊಂದಿದ ವಿದ್ಯಾರ್ಥಿಗಳು ಸೇವಾಸಿಂಧು ಆನ್‍ಲೈನ್ ಪೋರ್ಟಲ್ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. *ಶಾಲೆಗಳ ವಿವರ:* ಬಳ್ಳಾರಿ ತಾಲೂಕಿನ ಕೊಳಗಲ್ಲಿನ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಸಿ)ಯ ಪ್ರಾಂಶುಪಾಲರ ಮೊ.7353346069. ಸಂಡೂರು ತಾಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ.9480933730. ಕಂಪ್ಲಿ ತಾಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ.9113280239. ಸಂಕ್ಷಿಪ್ತ ಅಧಿಸೂಚನೆ ಮತ್ತು ವಿವರಗಳಿಗಾಗಿ http://dom.karnataka.gov.in ವೆಬ್‍ಸೈಟ್‍ಗೆ ಭೇಟಿ ನೀಡಬಹುದು. *ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಸಂಪರ್ಕ ವಿವರ:* ಬಳ್ಳಾರಿ-8310321101, ಸಂಡೂರು-9036925966, 8660575067 ಮತ್ತು ಸಿರುಗುಪ್ಪ-9148889975. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯದ ದೂ.08392-200125/224, ಸಹಾಯವಾಣಿ ಕೇಂದ್ರ 8277799990 (24*7) ಅಥವಾ ತಾಲೂಕು ಅಲ್ಪ ಸಂಖ್ಯಾತರ ವಿಸ್ತರಣಾಧಿಕಾರಿಗಳ ಹಾಗೂ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ, ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ