ಗುರುವಾರ, ಮಾರ್ಚ್ 14, 2024

ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮದಲ್ಲಿ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಮಾ.14(ಕರ್ನಾಟಕ ವಾರ್ತೆ): ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಮತ್ತು ಅಡ್ವಟೈಸಿಂಗ್ ಸಂಸ್ಥೆಯವರಿಂದ 2023-24ನೇ ಸಾಲಿನ ಪರಿಶಿಷ್ಠ ಪಂಗಡಗಳ ಸಮುದಾಯದ ಪತ್ರಿಕೋದ್ಯಮ ವಿದ್ಯಾರ್ಹತೆ ಪೂರ್ಣಗೊಳಿಸಿದ ಯುವಕ, ಯುವತಿರಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ಪಡೆಯಲು ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಮಾ.28 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392245551/52 ಗೆ ಸಂಪರ್ಕಿಸಬಹುದು ಎಂದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ