ಶನಿವಾರ, ಮಾರ್ಚ್ 16, 2024
ಲೋಕಸಭೆ ಚುನಾವಣೆ ದಿನಾಂಕ ಘೋಷಣೆ; ಚುನಾವಣೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ: ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
xಬಳ್ಳಾರಿ,ಮಾ.16(ಕರ್ನಾಟಕ ವಾರ್ತೆ):
ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗಿ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಎಲ್ಲಾ ನೋಡಲ್ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಬಿಎಲ್‍ಒಗಳಿಗೆ ಸೂಚಿಸಿದರು.
ಲೋಕಸಭೆ ಸಾರ್ವತ್ರಿಕ ಚುನಾವಣೆ 2024 ರ ಘೋಷಣೆಯಾದ ಹಿನ್ನಲೆಯಲ್ಲಿ ಶನಿವಾರದಂದು, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಎಲ್ಲಾ ಚುನಾವಣಾ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, 24, 48 ಹಾಗೂ 72 ಗಂಟೆಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮೂರು ವಿವಿಧ ಭಾಗಗಳಲ್ಲಿ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಮೊದಲ ಹಂತದಲ್ಲಿ 24 ಗಂಟೆಯೊಳಗೆ ಸರ್ಕಾರದ ಜಾಹೀರಾತುಗಳು, ಎರಡನೇ ಹಂತದಲ್ಲಿ 48 ಗಂಟೆಯೊಳಗೆ ಸರ್ಕಾರಿ ಸ್ವಾಮ್ಯದ ನಿಗಮ ಮಂಡಳಿಗಳು ಹಾಗೂ ಮೂರನೇ ಹಂತದಲ್ಲಿ 72 ಗಂಟೆಯೊಳಗೆ ಖಾಸಗಿ ವಲಯದಲ್ಲಿ ನೀತಿ ಸಂಹಿತೆಗೆ ವಿರುದ್ದವಾದ ಜಾಹೀರಾತುಗಳನ್ನು ತೆಗೆಯಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಗ್ರಾಪಂ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳ ಬ್ಯಾನರ್, ಫ್ಲೆಕ್ಸ್, ಉದ್ಘಾಟನೆಗೊಂಡ ಕಾಮಗಾರಿಗಳ ಫಲಕಗಳು, ಗ್ರಾಮ, ನಗರಗಳ ಸ್ವಾಗತ ಕಮಾನುಗಳು ಹಾಗೂ ಕೊಡುಗೆ ನೀಡಿದ ವಸ್ತುಗಳ ಮೇಲೆ ರಾಜಕೀಯ ವ್ಯಕ್ತಿಗಳ ಹಾಗೂ ಜನಪ್ರತಿನಿಧಿಗಳ ಭಾವಚಿತ್ರ ತೆರವುಗೊಳಿಸುವಂತೆ ಕ್ರಮ ವಹಿಸಬೇಕು. ಸರಕಾರಿ ಸ್ವಾಮ್ಯದ ಅತಿಥಿ ಗೃಹಗಳಲ್ಲಿ ಯಾವುದೇ ರಾಜಕೀಯ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು ಎಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಎಂಸಿಸಿ ತಂಡಗಳು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಬೇಕು. ಸಹಾಯಕ ವೆಚ್ಚ ವೀಕ್ಷಕರು, ಫ್ಲೈಯಿಂಗ್ ಸ್ಕ್ವಾಡ್, ವೀಡಿಯೋ ಸರ್ವೆಲನ್ಸ್, ವೀಡಿಯೋ ವಿವ್ಹಿಂಗ್ ತಂಡಗಳು, ಸ್ಟ್ಯಾಟಿಕ್ ಸರ್ವೆಲನ್ಸ್ ತಂಡಗಳು ಜಾಗೃತರಾಗಿ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಮತ್ತು ಗಡಿಜಿಲ್ಲೆ ಭಾಗದಲ್ಲಿ ಚೆಕ್ ಪೆÇೀಸ್ಟ್‍ಗಳು ಕಾರ್ಯಪ್ರವೃತ್ತವಾಗಬೇಕು. ಸಮರ್ಪಕ ವಿದ್ಯುತ್ ಸಂಪರ್ಕ ವ್ಯವಸ್ಥೆ ಮಾಡಿಕೊಳ್ಳಬೇಕು. ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದರಲ್ಲದೇ, 103 ಪೆÇಲೀಸ್ ಸೆಕ್ಟರ್ ನಿಯೋಜನೆಗೊಂಡ ಅಧಿಕಾರಿಗಳು ಚುನಾವಣಾ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ಆಯೋಗದ ನಿರ್ದೇಶನಗಳನ್ನು ಅಚ್ಚುಕಟ್ಟಾಗಿ ಪಾಲಿಸಬೇಕು ಎಂದರು.
ಮತದಾರ ಚುನಾವಣಾ ಗುರುತಿನ ಚೀಟಿಯಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಆಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ನೀಡಲು ಸಾರ್ವಜನಿಕ ವಲಯದಲ್ಲಿ ಸಹಾಯವಾಣಿ ಸಂಖ್ಯೆ 1950 ಕುರಿತು ಹೆಚ್ಚು ಪ್ರಚಾರ ನೀಡಬೇಕು ಎಂದು ತಿಳಿಸಿದರು.
ಅಗತ್ಯವಿರುವ 85 ವರ್ಷ ಮೇಲ್ಪಟ್ಟ ವಯಸ್ಕರು ಮತ್ತು ವಿಶೇಷಚೇತನರಿಗೆ ಮಾತ್ರ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಬೇಕು. ಇಲ್ಲವಾದಲ್ಲಿ ಮತಗಟ್ಟೆ ಕೇಂದ್ರಗಳಿಗೆ ತೆರಳಿ ಮತದಾನ ಮಾಡುವಂತೆ ಸೂಚಿಸಬೇಕು ಎಂದರು.
ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಹಾಗೂ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಪ್ರಮಾಣ ಹೆಚ್ಚಿಸಲು ಎಂಸಿಸಿ ಸಮಿತಿಯಿಂದ ಹಲವಾರು ಕಾರ್ಯಕ್ರಮಗಳ ಪಟ್ಟಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕೈಜೋಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಸಹಾಯಕ ಆಯುಕ್ತರಾದ ಹೇಮಂತ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಹಾಗೂ ತಾಪಂ ಇಓಗಳು ಉಪಸ್ಥಿತರಿದ್ದರು.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)








ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ