ಶನಿವಾರ, ಮಾರ್ಚ್ 2, 2024
ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದಿಂದ ಜನ ಸಂಪರ್ಕ ಸಭೆ/ಅಹವಾಲು ಸ್ವೀಕಾರ
ಬಳ್ಳಾರಿ,ಮಾ.02(ಕರ್ನಾಟಕ ವಾರ್ತೆ):
ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ಸಂಗಮೇಶ ಮತ್ತು ಮಹಮ್ಮದ್ ರಫಿ ಇವರ ನೇತೃತ್ವದಲ್ಲಿ ಮಾರ್ಚ್ ಮಾಹೆಯಲ್ಲಿ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ.
*ಅಹವಾಲು ಸ್ವೀಕರಿಸುವ ದಿನ ಮತ್ತು ಸ್ಥಳ:*
ಮಾ.12 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕುರುಗೋಡು ತಾಲ್ಲೂಕಿನ ತಹಸೀಲ್ದಾರರ ಕಚೇರಿ ಸಭಾಂಗಣ.
ಮಾ.13 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2 ರ ವರೆಗೆ ಸಿರುಗುಪ್ಪ ತಾಲ್ಲೂಕಿನ ಸಿ.ಡಿ.ಪಿ.ಓ ಕಚೇರಿ ಸಭಾಂಗಣ.
ಮಾ.15 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2 ರ ಸಂಡೂರು ಪಟ್ಟಣದ ತಹಸೀಲ್ದಾರರ ಕಚೇರಿ ಸಭಾಂಗಣ.
ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ವಿಚಾರಿಸಲಾಗುತ್ತದೆ ಹಾಗೂ ಸಾರ್ವಜನಿಕರು ತಮ್ಮ ಅವಹಾಲುಗಳನ್ನು ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಲೋಕಾಯುಕ್ತರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ:1 ಮತ್ತು 2ಗಳನ್ನು ನೀಡಲಾಗುತ್ತದೆ.
ಕುಂದುಕೊರತೆಗಳಿರುವ ಸಾರ್ವಜನಿಕರು ನಿಗದಿಪಡಿಸಿದ ದಿನದಂದು ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ