ಬುಧವಾರ, ಮಾರ್ಚ್ 13, 2024

ಮೃತನ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ ಮಾ,13(ಕರ್ನಾಟಕ ವಾರ್ತೆ); ನಗರದ ವಿಮ್ಸ್ ಅಸ್ಪತ್ರೆ ಅವರಣದಲ್ಲಿ ಯಾವುದೋ ಖಾಯಿಲೆಯಿಂದ ಬಳಲುತ್ತಿದ್ದ ಸುಮಾರು 55 ವóರ್ಷದ ಅನಾಮಧೇಯ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ ಮಾ.09 ರಂದು ಮೃತಪಟ್ಟಿದ್ದು, ಮೃತನ ವಾರಸದಾರರ ಪತ್ತೆಗೆ ಸಹಕರಿಸಬೇಕು ಎಂದು ಕೌಲ್‍ಬಜಾರ್ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಮನವಿ ಮಾಡಿದ್ದಾರೆ. ಮೃತನ ಚಹರೆ: ಎತ್ತರ 5 ಅಡಿ 6 ಇಂಚು, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ, ತಲೆಯಲ್ಲಿ ಕಪ್ಪು ಮತ್ತು ಬಿಳಿ ಮಿಶ್ರಿತ ಕೂದಲು, ಕುರುಚಲು ಗಡ್ಡ ಇದ್ದು, ಎಡಕಣ್ಣು ಸಣ್ಣಗೆ ಇರುತ್ತದೆ ಈ ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392258100, ಕೌಲ್‍ಬಜಾರ್ ಪೊಲೀಸ್ ಠಾಣೆಯ ಪಿ.ಐ ಮೊ.9480803047, ಕೌಲ್‍ಬಜಾರ್ ಪೊಲೀಸ್ ಠಾಣೆಯ ಪಿ.ಎಸ್.ಐ ಮೊ.9480803048 ಗೆ ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ