ಸೋಮವಾರ, ಮಾರ್ಚ್ 11, 2024
ಆರೋಗ್ಯ ಸೌಧದ ಕಟ್ಟಡಕ್ಕೆ ಭೂಮಿಪೂಜೆ
ಬಳ್ಳಾರಿ,ಮಾ.11(ಕರ್ನಾಟಕ ವಾರ್ತೆ):
ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು, ಇಂದು ಜಿಲ್ಲಾ ಖನಿಜ ಪ್ರತಿಷ್ಟಾನದ 2020-21 ನೇ ಸಾಲಿನ 6 ಕ್ರಿಯಾ ಯೋಜನೆಯಡಿ ನಿರ್ಮಿಸಲಾಗುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದ (ಆರೋಗ್ಯ ಸೌಧ) ನೂತನ ಕಟ್ಟಡಕ್ಕೆ ಭೂಮಿಪೂಜೆ ನೇರವೆರಿಸಿದರು.
ಈ ವೇಳೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಮಹಾನಗರ ಪಾಲಿಕೆ ಮೇಯರ್ ಬಿ.ಶ್ವೇತ, ಉಪಮೇಯರ್ ಬಿ.ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್‍ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಲೋಕೊಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಹೇಮರಾಜ್ ಸೇರಿದಂತೆ ಪಾಲಿಕೆಯ ಸದಸ್ಯರು, ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ