ಬುಧವಾರ, ಮಾರ್ಚ್ 13, 2024
ಬಳ್ಳಾರಿ: ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸನ್ಮಾನ
ಬಳ್ಳಾರಿ,ಮಾ.13(ಕರ್ನಾಟಕ ವಾರ್ತೆ):
ಜಿಲ್ಲಾ ಪೆÇಲೀಸ್ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬುಧವಾರದಂದು ಜಿಲ್ಲಾ ಪೆÇಲೀಸ್ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ಮಹಿಳಾ ಅಧಿಕಾರಿ, ಸಿಬ್ಬಂದಿಯವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು ಅವರು, ಮಹಿಳಾ ಅಧಿಕಾರಿ, ಸಿಬ್ಬಂದಿಯವರಿಗೆ ಶುಭಾಷಯ ಕೋರಿದರು.
ಇದೇ ಸಂದರ್ಭದಲ್ಲಿ ಪೆÇಲೀಸ್ ಠಾಣೆ, ಕಚೇರಿ ಹಾಗೂ ಘಟಕಗಳಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿಯವರಿಗೆ ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಗರಿ ಕೃಷಿ ಸಂಶೋಧನಾ ಕೇಂದ್ರದ ಆಹಾರ ವಿಜ್ಞಾನದ ವಿಜ್ಞಾನಿಗಳಾದ ಶಿಲ್ಪ ಅವರು ಮಾತನಾಡಿ, ಮಹಿಳೆಯರು ತಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಲು ಉತ್ತಮ ಸಲಹೆ ಸೂಚನೆ ನೀಡಿದರು.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರ ವೃತ್ತಿ ಜೀವನ ಸುಧಾರಿಸುವ ನಿಟ್ಟಿನಲ್ಲಿ ಇಬ್ಬರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಟರಾಜ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ