ಮಂಗಳವಾರ, ಮಾರ್ಚ್ 19, 2024
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳಾರಿ,ಮಾ.19(ಕರ್ನಾಟಕ ವಾರ್ತೆ):
ಜಿಲ್ಲೆಯ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರು ಕುರಿತು ಮಂಗಳವಾರದಂದು ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯ ಪ್ರತಿ ಪುರಸಭೆ, ಪಟ್ಟಣ ಪಂಚಾಯಿತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು. ಮುಂಬರುವ ಸಮಸ್ಯಾತ್ಮಕ ಹಳ್ಳಿಗಳ ಗುರುತಿಸಿ ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದರು.
ಯಾವುದೇ ಜಲಮೂಲಗಳ ನೀರನ್ನು ಕುಡಿಯುವ ನೀರು ಹೊರತುಪಡಿಸಿ ಬೇರೆ ಉದ್ದೇಶಗಳಿಗೆ ಬಳಸಬಾರದು. ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾ ಹಾಗೂ ತಾಲೂಕು ಆಡಳಿತಗಳು ಸಿದ್ದವಾಗಿರಬೇಕು ಎಂದರು.
ಆದಷ್ಟು ಹೊಸ ಕೊಳವೆ ಬಾವಿ ತೋಡಿಸುವುದಕ್ಕಿಂತ ಇರುವ ಕೊಳವೆ ಬಾವಿಗಳನ್ನು ದುರಸ್ತಿಪಡಿಸಿ ಮೋಟಾರ್, ಪಂಪ್ ಅಳವಡಿಸಲು ಕ್ರಮವಹಿಸಬೇಕು. ನೀರು ಪೆÇೀಲಾಗದಂತೆ ನೋಡಿಕೊಳ್ಳಬೇಕು. ಅವಶ್ಯವಿದ್ದರೆ ಖಾಸಗಿ ಬೋರ್‍ವೇಲ್‍ಗಳನ್ನು ಉಪಯೋಗಿಸಿಕೊಳ್ಳಬೇಕು ಎಂದರು.
ಪ್ರಸ್ತುತ 15 ದಿನಗಳವರೆಗೆ ಎಲ್‍ಎಲ್‍ಸಿ ಕಾಲುವೆಯಲ್ಲಿ ನೀರು ಹರಿಯಲಿದ್ದು, ಈ ಕೂಡಲೇ ಕೆರೆ, ಓಹೆಚ್‍ಟಿಗಳನ್ನು ತುಂಬಿಸಿಕೊಳ್ಳಬೇಕು. ನೀರಿನ ಸಂಗ್ರಹಣೆಗೆ ಕ್ರಮವಹಿಸಬೇಕು. ವಿವಿಧ ಭಾಗಗಳಲ್ಲಿ ನೀರಿನ ಕೊರತೆ ಕಂಡುಬಂದಲ್ಲಿ ಟ್ಯಾಂಕರ್ ಮೂಲಕ ಸರಬರಾಜು ಮಾಡಲು ಮುಂದಾಗಬೇಕು ಎಂದು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿಗಳು, ಪುರಸಭೆ, ಪಟ್ಟಣ ಪಂಚಾಯಿತಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಉಪಸ್ಥಿತರಿದ್ದರು.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ