ಗುರುವಾರ, ಮಾರ್ಚ್ 21, 2024
ಲೋಕಸಭೆ ಸಾರ್ವತ್ರಿಕ ಚುನಾವಣೆ; ಕಂಟ್ರೋಲ್ ರೂಂ ಆರಂಭ
ಬಳ್ಳಾರಿ,ಮಾ.21(ಕರ್ನಾಟಕ ವಾರ್ತೆ):
ಲೋಕಸಭೆ ಸಾರ್ವತ್ರಿಕ ಚುನಾವಣೆ 2024ರ ಅಂಗವಾಗಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸುಗಮ ಹಾಗೂ ಪಾರದರ್ಶಕ ಚುನಾವಣೆಯನ್ನು ನಡೆಸುವ ಸಂಬಂಧ ಸಾರ್ವಜನಿಕರ ದೂರು-ದುಮ್ಮಾನಗಳನ್ನು ಆಲಿಸಲು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ.
ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರುಗಳು, ಮಾಹಿತಿ ಹಾಗೂ ಇತರೆ ಸಾರ್ವಜನಿಕ ಕುಂದುಕೊರತೆಗಳು ಇದ್ದಲ್ಲಿ ಟೋಲ್ ಫ್ರೀ ಸಂಖ್ಯೆ 08392-277100 ಮತ್ತು 1950 ಕರೆ ಮಾಡಿ ತಿಳಿಸಿಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ