ಶುಕ್ರವಾರ, ಮಾರ್ಚ್ 1, 2024

ಮಹಿಳೆಯರು ಸ್ವ-ಉದ್ಯೋಗದಿಂದ ಆರ್ಥಿಕವಾಗಿ ಸಬಲರಾಗಬೇಕು: ಪಿ.ಎಸ್.ಹಟ್ಟಪ್ಪ

ಬಳ್ಳಾರಿ,ಮಾ.01(ಕರ್ನಾಟಕ ವಾರ್ತೆ): ಮಹಿಳೆಯರು ಸಣ್ಣದಾಗಿ ಸ್ವ-ಉದ್ಯೋಗ ಮಾಡುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕೆಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ಹೇಳಿದರು. ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಮಹಿಳೆಯರಿಗೆ ಟೈಲರಿಂಗ್ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ವಿವಿಧ ರೀತಿಯ ಹೊಸ ವಿನ್ಯಾಸದಲ್ಲಿ ಬಟ್ಟೆ ಒಲಿಯುವ ಹವ್ಯಾಸ ಬೆಳೆಸಿಕೊಂಡು ಮಹಿಳೆಯರು ಸಬಲರಾಗಬೇಕು ಎಂದು ಮಾರ್ಗದರ್ಶನ ನೀಡಿದರು. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರಾಜಾಸಾಬ್ ಹೆಚ್.ಯರಿಮನಿ ಅವರು ಮಾತನಾಡಿ, ಮಹಿಳೆಯರು ಕಾರ್ಯಕ್ಷೇತ್ರದಲ್ಲಿ ಪರಿಪೂರ್ಣತೆಯಿಂದ ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ತರಬೇತಿಯು ಅರ್ಥಪೂರ್ಣವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಆರ್.ವಿಶ್ವನಾಥ, ಸಿಬ್ಬಂದಿಗಳಾದ ವಿನೋದ, ದುಂಡೇಶ ಬಡಿಗೇರ, ಮಂಜುಳಾ, ಸಿದ್ದಲಿಂಗಮ್ಮ, ಸಂತೋಷ ಕುಮಾರ, ಕಿರಣ ಕುಮಾರ ಉಪಸ್ಥಿತರಿದ್ದರು. ತರಬೇತಿಯಲ್ಲಿ ಒಟ್ಟು 23 ಜನ ಶಿಬಿರಾರ್ಥಿಗಳು ಭಾಗವಹಿಸಿದ್ದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ